Dailyhunt Logo
  • Light mode
    Follow system
    Dark mode
    • Play Story
    • App Story
ಮಂಗಳೂರಿನ ನಾರಾಯಣಗುರು ವೃತ್ತದಲ್ಲಿ ಬಿಜೆಪಿಯಿಂದ ಗುರು ಜಯಂತಿ ಆಚರಣೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪುಷ್ಪನಮನ

ಮಂಗಳೂರಿನ ನಾರಾಯಣಗುರು ವೃತ್ತದಲ್ಲಿ ಬಿಜೆಪಿಯಿಂದ ಗುರು ಜಯಂತಿ ಆಚರಣೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪುಷ್ಪನಮನ

ಮಂಗಳೂರು : ಬಿಜೆಪಿ ಮಂಗಳೂರು ನಗರ ದಕ್ಷಿಣ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಸಾಮಾಜಿಕ ಕ್ರಾಂತಿಯ ಹರಿಕಾರರಾದ ಗುರುಗಳ ನೆನಪಿನಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಮಂಗಳೂರಿನ ಪ್ರಮುಖ ವೃತ್ತಕ್ಕೆ ಅವರ ಹೆಸರಿಟ್ಟು, ಪ್ರತಿಮೆ ಸ್ಥಾಪಿಸಿತ್ತು.

ಜೊತೆಗೆ ಉರ್ವದಲ್ಲಿ ಸುಂದರ ಮಂದಿರ ನಿರ್ಮಾಣ ಹಾಗೂ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿತ್ತು ಎಂದು ಸ್ಮರಿಸಿದರು.

ಆದರೆ ಹಾಲಿ ಕಾಂಗ್ರೆಸ್ ಸರ್ಕಾರವು ಮೂರು ವರ್ಷಗಳ ಬಳಿಕ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಕಾಟಾಚಾರ ಪ್ರದರ್ಶಿಸಿದೆ. ಪ್ರತಿ ವರ್ಷ ನಿಗಮಕ್ಕೆ 500 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸದೇ, ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ಹಿಂದುಳಿದ ಸಮುದಾಯದ ಏಳಿಗೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಗೌರವಾನ್ವಿತ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮೂಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್, ಮುಖಂಡರಾದ ಮಹೇಶ್ ಜೋಗಿ, ಅರುಣ್ ಉರ್ವ, ಸುಕೇಶ್, ಕಿರಣ್, ನಿತಿನ್ ಕುಮಾರ್, ಮಾಜಿ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಮ್ಮ ಇಮೇಲ್ ವಿಳಾಸವನ್ನು ಪ್ರಕಟಿಸಲಾಗುವುದಿಲ್ಲ.ಕಡ್ಡಾಯ ಫೀಲ್ಡ್ಗಳನ್ನು * ಮೂಲಕ ಗುರುತಿಸಲಾಗಿದೆ

ಪ್ರತಿಕ್ರಿಯೆ

ಹೆಸರು

ಇಮೇಲ್

ಊರು

ನಂತರದ ಪ್ರತಿಕ್ರಿಯೆಗಾಗಿ ನನ್ನ ಹೆಸರು, ಇಮೇಲ್ ಮತ್ತು ವೆಬ್‌ಸೈಟ್ ಅನ್ನು ಈ ಬ್ರೌಸರ್‌ನಲ್ಲಿ ಉಳಿಸಿ.

Dailyhunt
Disclaimer: This content has not been generated, created or edited by Dailyhunt. Publisher: Megamedia News Kannada