Wednesday, 21 Apr, 11.48 pm myKhel ಕನ್ನಡ

ಮುಖಪುಟ
ಐಪಿಎಲ್ 2021: ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಚೆನ್ನೈ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೊದಲ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಆರ್‌ಸಿಬಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಇಂದಿನ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರು ಗೆಲುವು ಸಾಧಿಸಿದೆ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡಿದ್ದ ಧೋನಿ ಪಡೆ ಬಳಿಕ ಸತತ ಮೂರು ಗೆಲುವು ಸಾಧಿಸಿದಂತಾಗಿದೆ. ನೆಟ್‌ರನ್‌ರೇಟ್‌ಅನ್ನು ಉತ್ತಮವಾಗಿ ಕಾಯ್ದುಕೊಂಡ ಪರಿಣಾಮವಾಗಿ ಚೆನ್ನೈ ಅಗ್ರ ಸ್ಥಾನಕ್ಕೇರಿದೆ.

ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಜಾನಿ ಬೈರ್‌ಸ್ಟೋವ್ ಮೂರನೇ ಸ್ಥಾನಕ್ಕೆ ಏರಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನೀಡಿದ ಪ್ರದರ್ಶನ ಅವರನ್ನು ಈ ಸ್ಥಾನಕ್ಕೆ ತಲುಪಿಸಿದೆ. ಇನ್ನು ಚೆನ್ನೈ ಪರವಾಗಿ 95 ರನ್‌ಗಳನ್ನು ಸಿಡಿಸಿದ ಫಾಪ್ ಡು ಪ್ಲೆಸಿಸ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಮೊದಲ ಎರಡು ಸ್ಥಾನದಲ್ಲಿ ಶಿಖರ್ ಧವನ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಮುಂದುವರಿದಿದ್ದಾರೆ.

ಇನ್ನು ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ರಾಹುಲ್ ಚಾಹರ್ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚಾಹರ್ 4 ವಿಕೆಟ್ ಕಿತ್ತರು. ಹರ್ಷಲ್ ಪಟೇಲ್ ಈಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Mykhel Kannada
Top