Dailyhunt Logo
  • Light mode
    Follow system
    Dark mode
    • Play Story
    • App Story
BENGALURU: ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ವಿಮಾನದ ಮಾರ್ಗ ದಿಢೀರ್ ಬದಲಾವಣೆ!

BENGALURU: ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ವಿಮಾನದ ಮಾರ್ಗ ದಿಢೀರ್ ಬದಲಾವಣೆ!

Navasamaja.com 1 month ago

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ (Bengaluru) ಹೊರಟಿದ್ದ ವಿಮಾನವೊಂದು (Shocking) ಹವಾಮಾನ ವೈಪರೀತ್ಯದಿಂದ ಮಾರ್ಗ ಬದಲಿಸಿದ ಘಟನೆ ವರದಿಯಾಗಿವೆ. ಅದೃಷ್ಟವಶಾತ್, ಪೈಲಟ್‌ಗಳ ಸಮಯಪ್ರಜ್ಞೆ ಮತ್ತು ವಿಮಾನಯಾನ ಸಂಸ್ಥೆ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ವಿಮಾನಗಳಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.

ಹವಾಮಾನ ವೈಪರೀತ್ಯದಿಂದ ಮಾರ್ಗ ಬದಲಾವಣೆ
ಮಾಹಿತಿಗಳ ಪ್ರಕಾರ, ಮೇ 27 ರಂದು ಬೆಂಗಳೂರಿನಿಂದ ಒಡಿಶಾದ ಭುವನೇಶ್ವರಕ್ಕೆ ಹೊರಟಿದ್ದ 'ಆಕಾಶ ಏರ್' ಸಂಸ್ಥೆಯ ಕ್ಯೂಪಿ 1503 (QP 1503) ವಿಮಾನವನ್ನು ಉತ್ತರ ಪ್ರದೇಶದ ಲಕ್ನೋಗೆ ಹಠಾತ್ತಾಗಿ ಮಾರ್ಗ ಬದಲಾಯಿಸಿ (ಡೈವರ್ಟ್) ಲ್ಯಾಂಡ್ ಮಾಡಲಾಯಿತು. ಭುವನೇಶ್ವರ ವಿಮಾನ ನಿಲ್ದಾಣದ ಸುತ್ತಮುತ್ತ ದಿಢೀರನೆ ಹವಾಮಾನ ವೈಪರೀತ್ಯ ಉಂಟಾಗಿದ್ದರಿಂದ ಹಾಗೂ ಭಾರಿ ಗಾಳಿ-ಮಳೆಯಿಂದಾಗಿ ಸುರಕ್ಷಿತವಾಗಿ ವಿಮಾನ ಇಳಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಪೈಲಟ್ ಸುರಕ್ಷತಾ ನಿಯಮಾವಳಿಗಳ ಪ್ರಕಾರ ವಿಮಾನವನ್ನು ಲಕ್ನೋಗೆ ತೆಗೆದುಕೊಂಡು ಹೋಗಿ ಯಶಸ್ವಿಯಾಗಿ ಇಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಆಕಾಶ ಏರ್ ಸಂಸ್ಥೆಯ ವಕ್ತಾರರು, ಪ್ರಯಾಣಿಕರ ಹಾಗೂ ಸಿಬ್ಬಂದಿಯ ಸುರಕ್ಷತೆಯೇ ನಮಗೆ ಮುಖ್ಯವಾಗಿದ್ದು, ಹವಾಮಾನ ಸುಧಾರಿಸಿದ ಬಳಿಕ ವಿಮಾನವು ಲಕ್ನೋದಿಂದ ಹೊರಟು ಮೇ 28 ರ ಮಧ್ಯರಾತ್ರಿ ಭುವನೇಶ್ವರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅನಾವಶ್ಯಕ ವಿಳಂಬದಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲಕ್ಕೆ ಸಂಸ್ಥೆಯು ವಿಷಾದ ವ್ಯಕ್ತಪಡಿಸಿದೆ.

ಬೆಂಗಳೂರಿನಿಂದ ಹೊರಟಿದ್ದ ಆಕಾಶ ಏರ್‌ ವಿಮಾನದಲ್ಲಿ ಇಂಧನ ಕೊರತೆ!- ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಭುವನೇಶ್ವರಕ್ಕೆ (Bhuvaneshwar) ಹೊರಟಿದ್ದ ಆಕಾಶ ಏರ್ (Akasa Air) ವಿಮಾನವೊಂದು (Flight) ಇಂಧನ ಕೊರತೆಯಿಂದಾಗಿ ಉತ್ತರ ಪ್ರದೇಶದ ಲಕ್ನೋ ವಿಮಾನ ನಿಲ್ದಾಣದಲ್ಲಿ (Lucknow) ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಿನ್ನೆ ನಡೆದಿದೆ.

ಭುವನೇಶ್ವರದಲ್ಲಿ ಹವಾಮಾನ ಅತ್ಯಂತ ಕೆಟ್ಟದಾಗಿದ್ದರಿಂದ ವಿಮಾನದ ಮಾರ್ಗವನ್ನು ಬದಲಾಯಿಸಬೇಕಾಗಿ ಬಂದ ಹಿನ್ನೆಲೆಯಲ್ಲಿ ಈ ತುರ್ತು ಪರಿಸ್ಥಿತಿ ಎದುರಾಯಿತು. ಪೈಲಟ್‌ನ ಸಮಯಪ್ರಜ್ಞೆ ಹಾಗೂ ಲಕ್ನೋ ವಿಮಾನ ನಿಲ್ದಾಣದ ಅಧಿಕಾರಿಗಳ ತ್ವರಿತ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ವಿಮಾನದಲ್ಲಿದ್ದ ಎಲ್ಲಾ 194 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಭುವನೇಶ್ವರಕ್ಕೆ ತಲುಪಬೇಕಿದ್ದ ಬೋಯಿಂಗ್ 737 ಮ್ಯಾಕ್ಸ್ ವಿಮಾನವನ್ನು ಅಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ರಾತ್ರಿ 8.40 ರ ಸುಮಾರಿಗೆ ಲಕ್ನೋದತ್ತ ತಿರುಗಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ವಿಮಾನದ ಇಂಧನ ಮಟ್ಟ ಅತ್ಯಂತ ವೇಗವಾಗಿ ಕುಸಿಯುತ್ತಿರುವುದನ್ನು ಪೈಲಟ್ ಗಮನಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು ತಕ್ಷಣವೇ ವಾಯು ಸಂಚಾರ ನಿಯಂತ್ರಣ (ATC) ಸಂಸ್ಥೆಗೆ 'ಪ್ಯಾನ್ ಪ್ಯಾನ್' (Pan-Pan) ತುರ್ತು ಸಂದೇಶ ರವಾನಿಸಿ, ಆದ್ಯತೆಯ ಮೇರೆಗೆ ವಿಮಾನ ಇಳಿಸಲು ಅನುಮತಿ ಕೋರಿದರು.

ಪೈಲಟ್‌ನಿಂದ ಸಂದೇಶ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಲಕ್ನೋ ಎಟಿಸಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಿದರು. ರನ್‌ವೇಯನ್ನು ತಕ್ಷಣವೇ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‌ಪಿಎಫ್ ಸಿಬ್ಬಂದಿ, ಅಗ್ನಿಶಾಮಕ ದಳದ ವಾಹನಗಳು ಹಾಗೂ ವೈದ್ಯಕೀಯ ತಂಡಗಳನ್ನು ಆಂಬ್ಯುಲೆನ್ಸ್‌ಗಳೊಂದಿಗೆ ರನ್‌ವೇ ಸುತ್ತಲೂ ಸನ್ನದ್ಧವಾಗಿ ನಿಲ್ಲಿಸಲಾಯಿತು.

Dailyhunt
Disclaimer: This content has not been generated, created or edited by Dailyhunt. Publisher: Navasamaja