Dailyhunt Logo
  • Light mode
    Follow system
    Dark mode
    • Play Story
    • App Story
BENGALURU : ಬ್ರಾಂಡ್‌ ಬೆಂಗಳೂರಲ್ಲಿ ರಸ್ತೆ ಗುಂಡಿಗಳಿಗೆ ಸಿಗಲಿದೆ ಮುಕ್ತಿ: ಓಸಿ ಸಮಸ್ಯೆಗೂ ಬ್ರೇಕ್‌!

BENGALURU : ಬ್ರಾಂಡ್‌ ಬೆಂಗಳೂರಲ್ಲಿ ರಸ್ತೆ ಗುಂಡಿಗಳಿಗೆ ಸಿಗಲಿದೆ ಮುಕ್ತಿ: ಓಸಿ ಸಮಸ್ಯೆಗೂ ಬ್ರೇಕ್‌!

Navasamaja.com 1 week ago

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ರಸ್ತೆಗಳ ಗುಣಮಟ್ಟ ಸುಧಾರಣೆಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿಗೆ ಹಾಗೂ ಹೊಸದಾಗಿ ಡಾಂಬರೀಕರಣ (Asphalting) ಮಾಡಲು 2,000 ಕೋಟಿ ರೂಪಾಯಿ ಅನುದಾನ ನೀಡುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

3-4 ತಿಂಗಳಲ್ಲಿ ಮುಗಿಯಲಿದೆ ಕಾಮಗಾರಿ

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, "ನಗರದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಕಾಮಗಾರಿಗಳನ್ನು ಹೊರತುಪಡಿಸಿ, ಕೇವಲ ಹೊಸ ರಸ್ತೆಗಳ ಡಾಂಬರೀಕರಣಕ್ಕಾಗಿ ಈ 2,000 ಕೋಟಿ ರೂಪಾಯಿ ಅನುದಾನವನ್ನು ಬಳಸಲಾಗುವುದು. ಮುಂದಿನ 3 ರಿಂದ 4 ತಿಂಗಳ ಒಳಗಾಗಿ ಈ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು" ಎಂದು ಗಡುವು ನೀಡಿದರು. ಇದರಿಂದಾಗಿ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಗೆ ಶೀಘ್ರದಲ್ಲೇ ಮುಕ್ತಿ ಸಿಗುವ ನಿರೀಕ್ಷೆಯಿದೆ.

ಕಸದ ಸಮಸ್ಯೆ ನಿವಾರಣೆಗೆ ಸವಾಲು

ಬೆಂಗಳೂರು ನಗರ ಎದುರಿಸುತ್ತಿರುವ ಕಸದ ಸಮಸ್ಯೆಯ ಬಗ್ಗೆಯೂ ಮಾತನಾಡಿದ ಸಿಎಂ, "ನಗರದ ಕಸ ವಿಲೇವಾರಿ ಮಾಡುವುದು ನಮಗೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದರು. ಅಲ್ಲದೆ, ಗ್ರಾಮೀಣ ಭಾಗದ ಅಭಿವೃದ್ಧಿ ಹಾಗೂ ರೈತರ ಬದುಕನ್ನು ಹಸನುಗೊಳಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಎಂದು ಅವರು ಪುನರುಚ್ಚರಿಸಿದರು.

ಒನ್‌ ಟೈಂ ಓಸಿ ಆಫರ್‌

ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ಎಸ್ಕಾಂಗಳು ವಿದ್ಯುತ್‌ ಸಂಪರ್ಕ ಪಡೆಯಲು ಓಸಿ ಕಡ್ಡಾಯ ಮಾಡಿದ್ದವು.. ಈ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ. OC-CC ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ರಾಜ್ಯಾದ್ಯಂತ 2,500 ಚದರ ಅಡಿವರೆಗೆ ಒಸಿ ವಿನಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

2,500 ಅಡಿವರೆಗೂ 20% ಆಚೆ-ಈಚೆ ಇದ್ದರೂ ಒನ್ ಟೈಂ ಒಸಿ ವಿನಾಯ್ತಿಗೆ ನಿರ್ಧರಿಸಲಾಗಿದೆ. ಕಳೆದ ತಿಂಗಳು 31 ಒಳಗೆ ಅರ್ಜಿ ಹಾಕಿರೋರಿಗೆ ಅವಕಾಶ ಕೊಡುತ್ತೀವೆ. ಅಲ್ಲದೇ ನಗರ, ಗ್ರಾಮೀಣ ಎಲ್ಲಾ ಭಾಗದ ಜನರಿಗೆ ರಿಲೀಫ್ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja