Dailyhunt Logo
  • Light mode
    Follow system
    Dark mode
    • Play Story
    • App Story
BREAKING: ಸಿಎಂ ಆಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ

BREAKING: ಸಿಎಂ ಆಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ

Navasamaja.com 4 months ago

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಒಬ್ಬರಿಗೆ ಒಂದೇ ಹುದ್ದೆ ನಿಯಮಕ್ಕೆ ಗೌರವ ನೀಡಿ ತಮ್ಮ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Breaking) ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾರಣ, ಪಕ್ಷದ ಜವಾಬ್ದಾರಿಯಿಂದ ಮುಕ್ತರಾಗಲು ನಿರ್ಧರಿಸಿರುವ ಅವರು ತಮ್ಮ ರಾಜೀನಾಮೆ ಪತ್ರವನ್ನು ನೇರವಾಗಿ ದೆಹಲಿಯ ಹೈಕಮಾಂಡ್ ನಾಯಕರಿಗೆ ರವಾನಿಸಿದ್ದಾರೆ. ಇಷ್ಟು ದಿನಗಳ ಕಾಲ ಯಶಸ್ವಿಯಾಗಿ ಕೆಪಿಸಿಸಿ ಮುನ್ನಡೆಸಿದ್ದ ಡಿಕೆಶಿ ಅವರ ಈ ನಿರ್ಧಾರ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬಿಕೆ ಹರಿಪ್ರಸಾದ್‌ ಕೆಪಿಸಿಸಿ ನೂತನ ಸಾರಥಿ ?
ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಅತ್ಯುನ್ನತ ಅಧ್ಯಕ್ಷ ಗಾದಿಗೆ ಈಗ ಹಿರಿಯ ನಾಯಕ, ಮಾಜಿ ಸಂಸದ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುಂಚೂಣಿಗೆ ಬಂದಿದ್ದು, ಅವರ ನೇಮಕಾತಿ ಬಹುತೇಕ ಖಚಿತ ಎನ್ನಲಾಗಿದೆ. ಹಿಂದುಳಿದ ವರ್ಗದ ಪ್ರಭಾವಿ ನಾಯಕರಾಗಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಮಟ್ಟದಲ್ಲಿ ದಶಕಗಳ ಕಾಲ ಕೆಲಸ ಮಾಡಿದ ಅಪಾರ ಸಂಘಟನಾತ್ಮಕ ಅನುಭವ ಇದೆ. ಹೀಗಾಗಿ ಹೈಕಮಾಂಡ್ ನಾಯಕರು ಇವರ ಹೆಗಲಿಗೆ ರಾಜ್ಯ ಕಾಂಗ್ರೆಸ್‌ನ ಸಾರಥ್ಯವನ್ನು ನೀಡಲು ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.

ಸತೀಶ್ ಜಾರಕಿಹೊಳಿಗೆ ನಿರಾಸೆ?
ನೂತನ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಬೆಳಗಾವಿಯ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನವನ್ನೂ ತಮಗೆ ನೀಡಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದರು. ಸಚಿವರಾಗಿ ಮುಂದುವರಿಯುತ್ತಲೇ ಪಕ್ಷ ಸಂಘಟನೆ ಮಾಡುವುದು ಕಷ್ಟಸಾಧ್ಯ ಮತ್ತು ಪಕ್ಷದ ನಿಯಮಗಳಿಗೆ ಇದು ವಿರುದ್ಧವಾಗುತ್ತದೆ ಎಂಬ ಕಾರಣಕ್ಕೆ ಹೈಕಮಾಂಡ್ ಜಾರಕಿಹೊಳಿ ಅವರ ಪ್ರಸ್ತಾಪವನ್ನು ಬದಿಗಿಟ್ಟಿದೆ. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಅಧ್ಯಕ್ಷ ಪಟ್ಟ ಕೈತಪ್ಪಿದ್ದು, ಬಿ.ಕೆ. ಹರಿಪ್ರಸಾದ್ ಅವರ ಸಾರಥ್ಯಕ್ಕೆ ಹಾದಿ ಸುಗಮವಾಗಿದೆ. ಶೀಘ್ರದಲ್ಲೇ ದೆಹಲಿಯಿಂದ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja