ಬೆಂಗಳೂರು: ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ (Yogish Gowda) ಭೀಕರ ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿರುವ ಜಾಮೀನು (Bail) ಪುರಸ್ಕರಿಸಿರುವ ನ್ಯಾಯಾಲಯ ಜಾಮೀನು ನೀಡಲು ಸಮ್ಮತಿಸಿದೆ.
ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೂ ನ್ಯಾಯಾಲಯ ಜಾಮೀನು ನೀಡಿದೆ. ನ್ಯಾ. ಮೊಹಮ್ಮದ್ ಹಾಗೂ ಜಿ. ಬಸವರಾಜ್ ಅವರ ನೇತೃತ್ವದ ನ್ಯಾಯಪೀಠ ತೀರ್ಪು ನೀಡಿದ್ದು, ಐದು ಲಕ್ಷ ರೂ. ಬಾಂಡ್ ಹಾಗೂ ಶೂರಿಟಿ ನೀಡಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಕೋರ್ಟ್ ಅನುಮತಿಯಿಲ್ಲದೇ ವಿದೇಶ ಪ್ರವಾಸ ಹೋಗಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ಏಳು ಮಂದಿ ಪ್ರಮುಖ ಆರೋಪಿಗಳ ಕೃತ್ಯದಿಂದ ನಡೆದಿದ್ದ ಈ ಪ್ರಕರಣದಲ್ಲಿ ಸಿಬಿಐ 750 ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷಿ ಎಂದಿದ್ದ ಕೋರ್ಟ್ ಈಗ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಆದೇಶ ನೀಡಿದೆ. ಪ್ರಕರಣದ ಹಿನ್ನೆಲೆ ಏನು? 2016 ಜೂನ್ 15 ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮ ಜಿಮ್ ಹೊರಗಡೆ ಬಿಜೆಪಿ ನಾಯಕ ಯೋಗೀಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಸುದೀರ್ಘ ತನಿಖೆ ನಡೆಸಿದ್ದ ಸಿಬಿಐ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪಾತ್ರವಿರುವುದನ್ನು ಉಲ್ಲೇಖಿಸಿ ದೋಷಾರೋಪಪಟ್ಟಿ (Charge Sheet) ಸಲ್ಲಿಸಿ ಬಂಧಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯವು ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿ ಜೈಲು ಶಿಕ್ಷೆ ವಿಧಿಸಿತ್ತು. ಸಿಬಿಐ ಕೋರ್ಟ್ ನೀಡಿರುವ ಈ ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತೀರ್ಪು ಕಾಯ್ದಿರಿಸಿದ್ದ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಬಸವರಾಜ ಅವರನ್ನೊಳಗೊಂಡ ಹೈಕೋರ್ಟ್‌ನ ದ್ವಿಪೀಠವು ಈ ಅರ್ಜಿಯ ಸುದೀರ್ಘ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು. ಆ ಕಾಯ್ದಿರಿಸಿದ ತೀರ್ಪನ್ನು ನ್ಯಾಯಪೀಠವು ಇದು ಪ್ರಕಟಿಸಿಲಿದೆ. ಶಾಸಕತ್ವಕ್ಕೂ ಆತಂಕ: ರಾಜಕೀಯ ಭವಿಷ್ಯ ನಿರ್ಣಾಯಕ ಜನಪ್ರತಿನಿಧಿಗಳ ಕಾಯ್ದೆಯನ್ವಯ ಯಾವುದೇ ಶಾಸಕ ಅಥವಾ ಸಂಸದರಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಶಿಕ್ಷೆಯಾದರೆ ಅವರ ಶಾಸಕತ್ವ ತಕ್ಷಣದಿಂದಲೇ ರದ್ದಾಗುತ್ತದೆ. ಹೀಗಾಗಿ, ಹೈಕೋರ್ಟ್ ಇಂದು ನೀಡಿರು ವತೀರ್ಪು ವಿನಯ್ ಕುಲಕರ್ಣಿ ಅವರ ರಾಜಕೀಯ ಜೀವನ ಮತ್ತು ಶಾಸಕತ್ವದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.

