Dailyhunt Logo
  • Light mode
    Follow system
    Dark mode
    • Play Story
    • App Story
BY VIJAYENDRA: ಎಸ್‌ಐಆರ್ ಪ್ರಕ್ರಿಯೆಗೆ  ಕಾಂಗ್ರೆಸ್ ಕಲ್ಲು ಹಾಕುತ್ತಿದೆ : ವಿಜಯೇಂದ್ರ ವಾಗ್ದಾಳಿ

BY VIJAYENDRA: ಎಸ್‌ಐಆರ್ ಪ್ರಕ್ರಿಯೆಗೆ ಕಾಂಗ್ರೆಸ್ ಕಲ್ಲು ಹಾಕುತ್ತಿದೆ : ವಿಜಯೇಂದ್ರ ವಾಗ್ದಾಳಿ

Navasamaja.com 1 week ago

ಬೆಂಗಳೂರು: ರಾಜ್ಯದಲ್ಲಿ ಸದ್ಯ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಬಿ.ವೈ. ವಿಜಯೇಂದ್ರ (BY Vijayendra) ಅವರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶಾದ್ಯಂತ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಕರ್ನಾಟಕದಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಅವರು, ರೈತರ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಗೆ ಕಲ್ಲು ಹಾಕುತ್ತಿದೆ ಕಾಂಗ್ರೆಸ್
ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "SIR ಪ್ರಕ್ರಿಯೆಯನ್ನು ಕೇವಲ ಕರ್ನಾಟಕ ಮಾತ್ರವಲ್ಲ, ದೇಶಾದ್ಯಂತ ಚುನಾವಣಾ ಆಯೋಗ ನಡೆಸುತ್ತಿದೆ. ಆದರೆ ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ," ಎಂದು ಆರೋಪಿಸಿದ್ದಾರೆ. ಸರ್ಕಾರವು ಅಧಿಕಾರಿಗಳನ್ನು ತನ್ನ ಸ್ವಾರ್ಥಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಮಸೀದಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಎಸ್‌ಐಆರ್ ನಡೆಸುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲೂ ಇದೇ ದುಸ್ಥಿತಿ ಇದೆ ಎಂದು ಅವರು ದೂರಿದ್ದಾರೆ.

ವೈಫಲ್ಯ ಮುಚ್ಚಿಕೊಳ್ಳಲು ಆಯೋಗದ ಮೇಲೆ ಗೂಬೆ ಕೂರಿಸಲಾಗುತ್ತಿದೆ
ಚುನಾವಣಾ ಆಯೋಗದ ಕೆಲಸಗಳಿಗೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದಿರುವ ವಿಜಯೇಂದ್ರ, "ತಮ್ಮ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗವನ್ನು ದೂರುತ್ತಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಸಿಎಂ ಮತ್ತು ಡಿ.ಕೆ. ಶಿವಕುಮಾರ್ ಅವರು ದೊಡ್ಡ ದೊಡ್ಡ ಜಾಹೀರಾತುಗಳನ್ನು ನೀಡುತ್ತಾ, ಆಯೋಗದ ಕೆಲಸಕ್ಕೆ ಕಲ್ಲು ಹಾಕುತ್ತಿದ್ದಾರೆ. ಕಾಂಗ್ರೆಸ್‌ಗೆ ಕನಿಷ್ಠ ಮಾನ ಮರ್ಯಾದೆ ಇದ್ದರೆ ಮೊದಲು ಚುನಾವಣಾ ಆಯೋಗದ ಕಾರ್ಯಕ್ಕೆ ಸಹಕಾರ ನೀಡಲಿ," ಎಂದು ಚಾಟಿ ಬೀಸಿದ್ದಾರೆ.

ಜಿಬಿಎ ವಾರ್ಡ್‌ಗಳಿಗೆ ಪ್ರತ್ಯೇಕ ಮತದಾರರ ಪಟ್ಟಿ ಪರಿಷ್ಕರಣೆ! ರಾಜ್ಯ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಆಯ್ದ ವಾರ್ಡ್‌ಗಳಲ್ಲಿ ಪ್ರತ್ಯೇಕವಾಗಿ 'ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ' (SIR) ನಡೆಸಲು ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶ ಈಗ ಹೈಕೋರ್ಟ್ (High Court) ಮೆಟ್ಟಿಲೇರಿದೆ. ಈ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳಿಗೆ (Election Commission )ನೋಟಿಸ್ ಜಾರಿ ಮಾಡಿದೆ.

ಜೂನ್ 19 ರಂದು ರಾಜ್ಯ ಚುನಾವಣಾ ಆಯೋಗವು ಹೊರಡಿಸಿದ್ದ ಈ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ವಿವೇಕ್ ಸೇರಿದಂತೆ ಐವರು ನಾಗರಿಕರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವೆಂಕಟೇಶ್ ದಳವಾಯಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

ಅರ್ಜಿದಾರರ ಪ್ರಮುಖ ಆಕ್ಷೇಪಗಳೇನು?
ಈಗಾಗಲೇ ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ವ್ಯವಸ್ಥಿತವಾಗಿ 'ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಇದರ ನಡುವೆ ರಾಜ್ಯ ಆಯೋಗವು ಬೆಂಗಳೂರಿನ ಕೆಲವು ವಾರ್ಡ್‌ಗಳಿಗೆ ಮಾತ್ರ ಪ್ರತ್ಯೇಕವಾಗಿ ಮತ್ತೊಂದು ಸಮಾನಾಂತರ ಪ್ರಕ್ರಿಯೆ ಆರಂಭಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮೂಡಿಸಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಜೂನ್ 26 ರಿಂದಲೇ ರಾಜ್ಯಾದ್ಯಂತ ಮನೆ ಮನೆ ಸಮೀಕ್ಷೆ ಕಾರ್ಯ ಅಧಿಕೃತವಾಗಿ ಚಾಲ್ತಿಯಲ್ಲಿದೆ. ಹೀಗಿರುವಾಗ ರಾಜ್ಯ ಆಯೋಗದ ಈ ಪ್ರತ್ಯೇಕ ನಿರ್ಧಾರವು ಕೇಂದ್ರದ ನಿರ್ದೇಶನಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja