ಬೆಂಗಳೂರು: ಬೆಂಗಳೂರಿನ (Bengaluru) ಬ್ರೂಕ್ಫೀಲ್ಡ್ ನಲ್ಲಿರುವ ಕೇಪ್ಜೆಮಿನಿ ಹೆಚ್‌ಎಎಲ್ ಕ್ಯಾಂಪಸ್ ಆವರಣದ ಸೊಸೈಟಿ ಜನರಲ್ ಬೇಬಿ ಕೇರ್ (Day Care) ಕೇಂದ್ರದಲ್ಲಿ ಪುಟ್ಟ ಮಕ್ಕಳ ಮೇಲೆ ಸಿಬ್ಬಂದಿ ಅಮಾನವೀಯವಾಗಿ (Crime) ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.
ಏನಿದು ಘಟನೆ.? ಕೆಲ ದಿನಗಳಿಂದ ಮಕ್ಕಳ ವರ್ತನೆಯಲ್ಲಿ ತೀವ್ರ ಬದಲಾವಣೆ ಹಾಗೂ ದೇಹದ ಮೇಲೆ ಸಣ್ಣಪುಟ್ಟ ಗಾಯದ ಗುರುತುಗಳನ್ನು ಪೋಷಕರು ಗಮನಿಸಿದ್ದರು. ಇದರಿಂದ ಅನುಮಾನಗೊಂಡು ಬೇಬಿ ಕೇರ್ ಸೆಂಟರ್‌ನ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಸಿಬ್ಬಂದಿಯ ಕ್ರೌರ್ಯ ಬೆಳಕಿಗೆ ಬಂದಿದೆ. ಆರೋಪಿ ಸಿಬ್ಬಂದಿಗಳು ಮಕ್ಕಳಿಗೆ ದೈಹಿಕವಾಗಿ ಹಿಂಸೆ ನೀಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೋಷಕರು ಆರೋಪಿಸಿದ್ದರು . ದೂರು ದಾಖಲಾಗುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮೂವರು ಪ್ರಮುಖ ಸಿಬ್ಬಂದಿಗೆ ಅಧಿಕೃತ ನೋಟಿಸ್ ನೀಡಲಾಗಿದ್ದು, ಇವತ್ತೇ ವಿಚಾರಣೆಗೆ ಹಾಜರಾಗುವಂತೆ ಕಡ್ಡಾಯವಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು . ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಬೇಬಿ ಕೇರ್ ಸೆಂಟರ್‌ನ ಪರವಾನಗಿಯನ್ನು ರದ್ದುಗೊಳಿಸುವಂತೆ ಪೋಷಕರು ತೀವ್ರ ಒತ್ತಾಯಿಸಿದ್ದಾರೆ. ಸದ್ಯ ಪೊಲೀಸರು ಸೆಂಟರ್‌ನ ಸಂಪೂರ್ಣ ಸಿಸಿಟಿವಿ ಡಿವಿಆರ್ (DVR) ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದರು.

