Dailyhunt Logo
  • Light mode
    Follow system
    Dark mode
    • Play Story
    • App Story
CRIME : ತನಿಖೆಗೆಂದು ಹೋಗಿದ್ದ ಕರ್ನಾಟಕ ಪೊಲೀಸ್ ಮಧ್ಯಪ್ರದೇಶದಲ್ಲಿ ದಾರುಣ ಸಾ*ವು!

CRIME : ತನಿಖೆಗೆಂದು ಹೋಗಿದ್ದ ಕರ್ನಾಟಕ ಪೊಲೀಸ್ ಮಧ್ಯಪ್ರದೇಶದಲ್ಲಿ ದಾರುಣ ಸಾ*ವು!

Navasamaja.com 3 weeks ago

ಬೆಂಗಳೂರು: ಸೈಬರ್ ಅಪರಾಧ (Cyber Crime) ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶಕ್ಕೆ (Madhya Pradesh) ತೆರಳಿದ್ದ ಬೆಂಗಳೂರು (Bengaluru) ಪೊಲೀಸ್ ತಂಡಕ್ಕೆ ಎದುರಾದ ಅಪಘಾತದಲ್ಲಿ (Crime) ಗಂಭೀರವಾಗಿ ಗಾಯಗೊಂಡಿದ್ದ ಇನ್ಸ್‌ಪೆಕ್ಟರ್ ರವಿ ಕೆ.ಬಿ.

ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕರ್ತವ್ಯದ ನಿಮಿತ್ತ ತೆರಳಿದ್ದ ವೇಳೆ ಸಂಭವಿಸಿದ ಈ ದುರಂತ ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ.

ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಕೆ.ಬಿ. ಅವರು ಪ್ರಕರಣದ ತನಿಖೆಗಾಗಿ ಪೊಲೀಸ್ ಸಿಬ್ಬಂದಿಯೊಂದಿಗೆ ಮಧ್ಯಪ್ರದೇಶಕ್ಕೆ ತೆರ ಳಿದ್ದರು. ತನಿಖೆ ಮುಗಿಸಿ ಭೋಪಾಲ್‌ನಿಂದ ಇಂದೋರ್ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.

ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಪರಿಣಾಮ ರವಿ ಕೆ.ಬಿ. ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ರವಿ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಪಿಎಸ್‌ಐ ಸೇರಿದಂತೆ ಇತರ ಮೂವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪಘಾತದ ನಿಖರ ಕಾರಣದ ಬಗ್ಗೆ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

2007ನೇ ಬ್ಯಾಚ್‌ನ ಅಧಿಕಾರಿಯಾಗಿದ್ದ ರವಿ ಕೆ.ಬಿ. ಅವರು ಬೆಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅಶೋಕನಗರ, ಇಂದಿರಾನಗರ ಮತ್ತು ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ಬಳಿಕ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಸೈಬರ್ ಅಪರಾಧ ಪ್ರಕರಣದ ತನಿಖೆಯ ಜವಾಬ್ದಾರಿ ಹೊತ್ತು ರಾಜ್ಯದಿಂದ ಹೊರಗೆ ತೆರಳಿದ್ದ ಸಂದರ್ಭದಲ್ಲೇ ರವಿ ಅವರ ಜೀವ ಅಂತ್ಯಗೊಂಡಿರುವುದು ಸಹೋದ್ಯೋಗಿಗಳಿಗೆ ಮತ್ತಷ್ಟು ನೋವು ತಂದಿದೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಸಂತಾಪದ ವಾತಾವರಣ ನಿರ್ಮಾಣವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja