Dailyhunt
DK SHIVAKUMAR: ಇಂಧನ, ಅನಿಲ ಕೊರತೆ; ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ-ಡಿಸಿಎಂ

DK SHIVAKUMAR: ಇಂಧನ, ಅನಿಲ ಕೊರತೆ; ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ-ಡಿಸಿಎಂ

Navasamaja.com 2 weeks ago

ಬೆಂಗಳೂರು: ರಾಜ್ಯದಲ್ಲಿ ಆಗುತ್ತಿರುವ ಗ್ಯಾಸ್‌ ಸಮಸ್ಯೆ ಬಗ್ಗೆ ಬಿಜೆಪಿ ಅವರು ಮಾತನಾಡುತ್ತಿಲ್ಲ. ಈ ವಿಚಾರವಾಗಿ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಆಗ್ರಹ ಮಾಡಿದ್ದಾರೆ.

ಕೇಂದ್ರ ಈ ಬಗ್ಗೆ ಗಮನಹರಿಸಬೇಕು

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಟೋ ಚಾಲಕರಿಗೆ ಗ್ಯಾಸ್‌ ಅಭಾವದಿಂದ ಬಹಳ ತೊಂದರೆಯಾಗುತ್ತಿದೆ. ಇದರಿಂದ ಸಂಚಾರ ವ್ಯವಸ್ಥೆಗೆ ಪರಿಣಾಮ ಬೀರುತ್ತಿದೆ. ಜತೆಗೆ ಹೊಟೇಲ್ ಕ್ಷೇತ್ರವು ಸಮಸ್ಯೆ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಆಟೋ ಚಾಲಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ ಬಳಿ ಕ್ಷಮೆ ಕೋರಬೇಕು ಎಂದು ಹೇಳಿದ್ದಾರೆ.

ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ

ಇನ್ನು ಉಪಚುನಾವಣೆ ಬಗ್ಗೆ ಸಹ ಮಾತನಾಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಗ್ಯಾರಂಟಿ ಫಲಾನುಭವಿಗಳಲ್ಲಿ ಕಳೆದ ಬಾರಿ ಬಿಜೆಪಿಗೆ ಮತ ಹಾಕಿರುವವರೂ ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಬೇಲೆ ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆ ಎಷ್ಟು ನೆರವಾಗುತ್ತಿವೆ ಎಂದು ಸ್ಮರಿಸುತ್ತಿದ್ದಾರೆ. ಇವುಗಳನ್ನು ಉಳಿಸಿಕೊಳ್ಳಲು ಜನ ತೀರ್ಮಾನಿಸಿದ್ದಾರೆ ಎಂದಿದ್ದಾರೆ.

ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, ಕೇರಳ ಚುನಾವಣೆ ಪ್ರಚಾರಕ್ಕೆ ಎರಡು ದಿನ ಪ್ರವಾಸ ಮಾಡಬೇಕಾಗಿದ್ದು, ಅಲ್ಲಿ ಪ್ರವಾಸ ಮಾಡಿ ಬಂದ ಬಳಿಕ, ಇಲ್ಲಿ ದಾವಣಗೆರೆ ಅಥವಾ ಬಾಗಲಕೋಟೆಗೆ ತೆರಳುತ್ತೇನೆ ಎಂದು ತಿಳಿಸಿದರು.

ಸಿಎಂ ದಾವಣಗೆರೆಯಲ್ಲಿ ಪ್ರಚಾರ ಮಾಡಲು ಹೇಳಿದ್ದು, ವೇಣುಗೋಪಾಲ್ ಅವರು ಕೇರಳದಲ್ಲಿ ಪ್ರಚಾರ ಮಾಡಲು ಹೇಳುತ್ತಿದ್ದಾರೆ ಎಂದು ಕೇಳಿದಾಗ, ನನಗೆ ಈ ವಿಚಾರವಾಗಿ ಗೊತ್ತಿಲ್ಲ. ಯಾರು ಇರಲಿ, ಇಲ್ಲದಿರಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ ಎಂದು ತಿಳಿಸಿದರು

Dailyhunt
Disclaimer: This content has not been generated, created or edited by Dailyhunt. Publisher: Navasamaja