Dailyhunt Logo
  • Light mode
    Follow system
    Dark mode
    • Play Story
    • App Story
DK SHIVAKUMAR : ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರಕ್ಕೆ ಅರ್ಜಿ - ಪ್ರತಿಪಕ್ಷಗಳೂ ಸಹಕರಿಸಲಿ ಎಂದ ಸಿಎಂ

DK SHIVAKUMAR : ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರಕ್ಕೆ ಅರ್ಜಿ - ಪ್ರತಿಪಕ್ಷಗಳೂ ಸಹಕರಿಸಲಿ ಎಂದ ಸಿಎಂ

Navasamaja.com 5 days ago

ಮೈಸೂರು: ಸುಪ್ರೀಂ ಕೋರ್ಟ್‌ನ(Supreme Court) ಅನುಕೂಲಕರ ತೀರ್ಪಿನ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಮೇಕೆದಾಟು ಯೋಜನೆ(mekedatu) ಜಾರಿಗೆ ಕೇಂದ್ರ ಸರ್ಕಾರದ ಅಂತಿಮ ಅನುಮತಿ ಪಡೆಯಲು ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧತೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್(dk shivakumar) ತಿಳಿಸಿದ್ದಾರೆ.

ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಡಾ. ಶ್ರೀ ರಾಜೇಂದ್ರ ಸ್ವಾಮೀಜಿ ಅವರ 111ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

5,400 ಹೆಕ್ಟೇರ್ ಭೂಮಿ ಅಗತ್ಯ; ಪರ್ಯಾಯ ಜಾಗ ನೀಡಲು ಸಿದ್ಧತೆ
"ರೈತರ ಹಿತದೃಷ್ಟಿಯಿಂದ ಕಾವೇರಿ ನೀರನ್ನು ಸಂರಕ್ಷಿಸಿ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ನಮ್ಮ ಜವಾಬ್ದಾರಿ. ಮೇಕೆದಾಟು ಯೋಜನೆಗೆ ಅರಣ್ಯ ಪ್ರದೇಶ ಸೇರಿದಂತೆ ಸುಮಾರು 5,400 ಹೆಕ್ಟೇರ್ ಭೂಮಿಯ ಅಗತ್ಯವಿದೆ. ಅರಣ್ಯ ಭೂಮಿಗೆ ಬದಲಾಗಿ ಪರ್ಯಾಯ ಭೂಮಿ ಒದಗಿಸಲು ಸರ್ಕಾರ ಸೂಕ್ತ ಸಿದ್ಧತೆ ಮಾಡಿಕೊಳ್ಳುತ್ತಿದೆ" ಎಂದು ಡಿ.ಕೆ. ಶಿವಕುಮಾರ್ ವಿವರಣೆ ನೀಡಿದರು.

ವಿಪಕ್ಷಗಳನ್ನೂ ವಿಶ್ವಾಸಕ್ಕೆ ಪಡೆದು ಕೇಂದ್ರದ ಬಳಿಗೆ ನಿಯೋಗ
ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಶೀಘ್ರದಲ್ಲೇ ಮನವಿ ಸಲ್ಲಿಸಲಿದ್ದು, ಈ ವಿಷಯದಲ್ಲಿ ಪ್ರತಿಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. "ದೇಶದ ಭೂಮಿ, ನೀರು ಮತ್ತು ಭಾಷೆಗೆ ಸಂಬಂಧಿಸಿದ ವಿಷಯಗಳಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು. ಇತ್ತೀಚೆಗೆ ತಮಿಳುನಾಡು ಭೇಟಿ ಸಂದರ್ಭದಲ್ಲೂ ಈ ಕುರಿತು ಮಾತುಕತೆ ನಡೆಸಿದ್ದೇನೆ" ಎಂದು ಹೇಳಿದರು.

ತುಂಗಭದ್ರಾ ಹೂಳು ತೆರವು: 3 ರಾಜ್ಯಗಳ ಸಭೆ ಐತಿಹಾಸಿಕ
ಇದೇ ವೇಳೆ ತುಂಗಭದ್ರಾ ಜಲಾಶಯದ ವಿಚಾರವನ್ನು ಪ್ರಸ್ತಾಪಿಸಿದ ಅವರು, "ಜಲಾಶಯದಲ್ಲಿ ಸುಮಾರು 33 ಟಿಎಂಸಿ ಅಡಿ ಹೂಳು ಸಂಗ್ರಹವಾಗಿದೆ. ಅದನ್ನು ತೆರವುಗೊಳಿಸಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿರುವುದು ಐತಿಹಾಸಿಕ ಬೆಳವಣಿಗೆ. ಈ ಹೂಳು ತೆರವಿಗೆ ಕೇಂದ್ರ ಸರ್ಕಾರ ಹೊಸ ನೀತಿಯನ್ನು ರೂಪಿಸಿದೆ" ಎಂದು ಮಾಹಿತಿ ನೀಡಿದರು.

Dailyhunt
Disclaimer: This content has not been generated, created or edited by Dailyhunt. Publisher: Navasamaja