Dailyhunt Logo
  • Light mode
    Follow system
    Dark mode
    • Play Story
    • App Story
DK SHIVAKUMAR : ಸಿಎಂ ಡಿಕೆ ಶಿವಕುಮಾರ್​​​​​ ನೇತೃತ್ವದ ನೂತನ ಸಂಪುಟದಲ್ಲಿ ಅಹಿಂದಕ್ಕೆ ಆದ್ಯತೆ

DK SHIVAKUMAR : ಸಿಎಂ ಡಿಕೆ ಶಿವಕುಮಾರ್​​​​​ ನೇತೃತ್ವದ ನೂತನ ಸಂಪುಟದಲ್ಲಿ ಅಹಿಂದಕ್ಕೆ ಆದ್ಯತೆ

Navasamaja.com 4 months ago

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು ತಮ್ಮ ಸಚಿವ ಸಂಪುಟದ (Cabinet) ಮೊದಲ ಹಂತದ ವಿಸ್ತರಣೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ.

ವಿಶೇಷವಾಗಿ ಅಹಿಂದ ವರ್ಗಗಳಿಗೆ ಮಂತ್ರಿಮಂಡಲದಲ್ಲಿ ಹೆಚ್ಚಿನ ಮಣೆ ಹಾಕಲಾಗಿದೆ.

ಹೌದು, ದಲಿತ ಸಮುದಾಯಕ್ಕೆ ಅತಿ ಹೆಚ್ಚು ಪ್ರಾತಿನಿಧ್ಯ ಸಿಕ್ಕಿದ್ದು, ಒಟ್ಟು ನಾಲ್ಕು ಸ್ಥಾನಗಳನ್ನು ನೀಡಲಾಗಿದೆ. ಇದರಲ್ಲಿ ಬಲಗೈ ಉಪಜಾತಿಗೆ ಸೇರಿದ ಜಿ. ಪರಮೇಶ್ವರ ಹಾಗೂ ಪ್ರಿಯಾಂಕ್‌ ಖರ್ಗೆ ಅವರಿಗೆ ಸ್ಥಾನ ಸಿಕ್ಕಿದ್ದರೆ, ಎಡಗೈ ಉಪಜಾತಿಯಿಂದ ಕೆ.ಎಚ್‌. ಮುನಿಯಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡದಿಂದ ಸತೀಶ ಜಾರಕಿಹೊಳಿ ಅವರು ಸಚಿವರಾಗಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಮೂರು ಸ್ಥಾನಗಳನ್ನು ಕಲ್ಪಿಸಲಾಗಿದ್ದು, ಎಂ.ಬಿ. ಪಾಟೀಲ, ಶರಣಪ್ರಕಾಶ್‌ ಪಾಟೀಲ ಮತ್ತು ಈಶ್ವರ್ ಖಂಡ್ರೆ ಅವರಿಗೆ ಸಚಿವ ಸ್ಥಾನ ಲಭಿಸಿದೆ.

ಇನ್ನುಳಿದಂತೆ ದುಳಿದ ಕುರುಬ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್‌ ಅವರಿಗೆ ಅವಕಾಶ ಸಿಕ್ಕಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಒಕ್ಕಲಿಗ ಸಮುದಾಯದಿಂದ ಕೃಷ್ಣಬೈರೇಗೌಡ ಸಂಪುಟ ಸೇರಿದ್ದಾರೆ. ಅಲ್ಪಸಂಖ್ಯಾತ ಕೋಟಾದಡಿ ಮುಸ್ಲಿಂ ಸಮುದಾಯದ ಯು.ಟಿ. ಖಾದರ್‌ ಮತ್ತು ಕ್ರೈಸ್ತ ಸಮುದಾಯದ ಕೆ.ಜೆ. ಜಾರ್ಜ್‌ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರೊಂದಿಗೆ ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿ ಅವರಿಗೂ ಮಂತ್ರಿಮಂಡಲದಲ್ಲಿ ಸ್ಥಾನ ಕಲ್ಪಿಸುವ ಮೂಲಕ ಎಲ್ಲ ವರ್ಗಗಳನ್ನು ಒಳಗೊಳ್ಳುವ ಪ್ರಯತ್ನ ಮಾಡಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja