Dailyhunt Logo
  • Light mode
    Follow system
    Dark mode
    • Play Story
    • App Story
DRONE PRATHAP: ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌, ಕಣ್ಣೀರಿಟ್ಟ ಡ್ರೋನ್ ಪ್ರತಾಪ್ -VIDEO

DRONE PRATHAP: ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌, ಕಣ್ಣೀರಿಟ್ಟ ಡ್ರೋನ್ ಪ್ರತಾಪ್ -VIDEO

ಬೆಂಗಳೂರು: ಡ್ರೋನ್ ಪ್ರತಾಪ್ (Drone Pratap) ಎರಡು ವರ್ಷಗಳ ಹಿಂದೆ ಭಾರಿ ಸದ್ದು ಮಾಡಿದ್ದ ಹೆಸರಾಗಿದ್ದು, ಡ್ರೋನ್ ತಯಾರಿಸುವುದಾಗಿ ಹೇಳಿ ದಿಗ್ಗಜರನ್ನು ಯಾಮಾರಿಸಿದ್ದರು. ತಾವೊಬ್ಬ (High Court) ವಿಜ್ಞಾನಿ ಎಂದು ಬಿಂಬಿಸಿಕೊಂಡು ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಅವಕಾಶ ಪಡೆದು, ಬಳಿಕ ಸಿಕ್ಕಿಬಿದ್ದು ಜೈಲಿಗೂ ಹೋಗಿ ಬಂದಿದ್ದರು.

ಇದರ ನಂತರ (Legal Relief) ಬಿಗ್‌ಬಾಸ್‌ನಲ್ಲಿ ಅವಕಾಶ ಪಡೆದು ಅಲ್ಲಿಂದ ಹೊರಹೊಮ್ಮಿದ್ದರು.

ಆದರೆ, ಇದರ ಬೆನ್ನಲ್ಲೇ, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟದ ಪ್ರಯೋಗ ನಡೆಸಿ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ಆಧರಿಸಿ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪ್ರತಾಪ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

ಕೊನೆಗೂ ದೇವರು ಕಣ್ಣುಬಿಟ್ಟ ಎಂದು ಗಳಗಳನೆ ಅತ್ತ ಡ್ರೋನ್ ಪ್ರತಾಪ್
ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಡ್ರೋನ್ ಪ್ರತಾಪ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಡ್ರೋನ್ ಪ್ರತಾಪ್ ಯಾವುದೇ ರೀತಿಯ ದುರುದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರಲಿಲ್ಲ ಎಂದು ಸ್ಪಷ್ಟಪಡಿಸಿ ಅವರ ಮೇಲಿನ ಎಫ್‌ಐಆರ್ ಅನ್ನು ಅಧಿಕೃತವಾಗಿ ರದ್ದುಗೊಳಿಸಿದೆ.

ನ್ಯಾಯಾಲಯದ ತೀರ್ಪು ಹೊರಬಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರತಾಪ್, ಗಳಗಳನೆ ಅಳುತ್ತಾ, "ಕೊನೆಗೂ ನನಗೆ ಜಯ ಸಿಕ್ಕಿದೆ, ನನ್ನನ್ನು ಎಲ್ಲಾ ಕೇಸ್‌ಗಳಿಂದ ಮುಕ್ತಗೊಳಿಸಲಾಗಿದೆ. ನನ್ನ ವಿರುದ್ಧ ಎಲ್ಲೆಂದರಲ್ಲಿ ಏನೇನೋ ಬರೆದರು, ಆದರೆ ಕೊನೆಗೂ ದೇವರು ಕಣ್ಣುಬಿಟ್ಟಿದ್ದಾನೆ" ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

ಏನಿದು ಪ್ರಕರಣ?
ಡ್ರೋನ್ ಪ್ರತಾಪ್ ಅವರು ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟಿಸಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋವನ್ನು ವಿನಯ್ ಎಂಬಾತ ಚಿತ್ರೀಕರಣ ಮಾಡಿದ್ದರೆ, ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಪ್ರಜ್ವಲ್ ಎಂಬಾತ ಸೋಡಿಯಂ ಮೆಟಲ್ ಅನ್ನು ಪ್ರತಾಪ್‌ಗೆ ಕೊಡಿಸಿದ್ದ ಎಂಬ ಮಾಹಿತಿ ಲಭ್ಯವಾಗಿತ್ತು.

ಈ ಪ್ರಕರಣದಲ್ಲಿ ಪ್ರತಾಪ್ ಬಂಧನದ ಬಳಿಕ ಪೊಲೀಸರು ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಸದ್ಯ ಹೈಕೋರ್ಟ್‌ನಿಂದ ಎಫ್‌ಐಆರ್ ರದ್ದಾಗಿರುವುದರಿಂದ ಅವರು ಈ ಎಲ್ಲಾ ಕಾನೂನು ತೊಡಕುಗಳಿಂದ ಸಂಪೂರ್ಣ ಮುಕ್ತರಾಗಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja