Dailyhunt Logo
  • Light mode
    Follow system
    Dark mode
    • Play Story
    • App Story
G PARAMESHWAR : ಕೇಂದ್ರದ ನಿಯಮದಂತೆ ಬರ ಅಧ್ಯಯನ - ಹತ್ತು ದಿನದಲ್ಲಿ ಪರಿಹಾರ ಸಿಗಬಹುದೆಂದ ಡಿಸಿಎಂ!

G PARAMESHWAR : ಕೇಂದ್ರದ ನಿಯಮದಂತೆ ಬರ ಅಧ್ಯಯನ - ಹತ್ತು ದಿನದಲ್ಲಿ ಪರಿಹಾರ ಸಿಗಬಹುದೆಂದ ಡಿಸಿಎಂ!

Navasamaja.com 6 days ago

ಮೈಸೂರು: ರಾಜ್ಯದಲ್ಲಿ (Karnataka) ಬರ ಪರಿಸ್ಥಿತಿಯಿಂದ (Drought) ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ (Farmers) ಪರಿಹಾರ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯದ 101 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದ್ದು, ಕೇಂದ್ರದ ನಿಯಮಗಳಂತೆ ಬರ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲಾಗಿದೆ ಎಂದು ಡಿಸಿಎಂ ಡಾ.

ಜಿ. ಪರಮೇಶ್ವರ್ (G. Parameshwar) ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡವೂ ಆಗಮಿಸಲಿದೆ. ತಂಡದ ಪರಿಶೀಲನೆ ಬಳಿಕ ಪರಿಹಾರ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದರು.

ಸದ್ಯ ರಾಜ್ಯ ಸರ್ಕಾರದ ಆದ್ಯತೆ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಅಗತ್ಯ ನೀರು ಒದಗಿಸುವುದಾಗಿದೆ. ಬರದಿಂದ ಉಂಟಾಗಿರುವ ಬೆಳೆ ಹಾಗೂ ಇತರ ನಷ್ಟದ ಅಂದಾಜು ಮಾಡುವ ಕಾರ್ಯವೂ ಮುಂದುವರಿದಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಷ್ಟದ ಪರಿಶೀಲನೆ ನಡೆಸಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.

ಕಳೆದ ಬಾರಿ ರಾಜ್ಯದಲ್ಲಿ ಸುಮಾರು 39 ಸಾವಿರ ಕೋಟಿ ರೂಪಾಯಿ ನಷ್ಟವಾಗಿತ್ತು. ಅದಕ್ಕೆ 18 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋದ ಬಳಿಕ ಕೇಂದ್ರದಿಂದ ಸುಮಾರು 3,500 ಕೋಟಿ ರೂಪಾಯಿ ನೆರವು ಬಂದಿತ್ತು. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸದಂತೆ ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಎಸ್‌ಡಿಆರ್‌ಎಫ್‌ನಿಂದ 1,200 ಕೋಟಿ ರೂಪಾಯಿ ನೀಡಲು ತೀರ್ಮಾನಿಸಲಾಗಿದ್ದು, ಅದನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಕೇಂದ್ರದಿಂದ ಹಣ ಶೀಘ್ರ ಬಿಡುಗಡೆಯಾದರೆ ರೈತರಿಗೆ ಕೂಡ ಬೇಗನೆ ಪರಿಹಾರ ನೀಡಲು ಅನುಕೂಲವಾಗಲಿದೆ. ಇನ್ನೊಂದು ವಾರ ಅಥವಾ ಹತ್ತು ದಿನಗಳಲ್ಲಿ ಪರಿಹಾರ ನೀಡುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.

ಇನ್ನು ಮೈಸೂರಿನ ಮದರಗಹಳ್ಳಿ ಕೃಷಿ ಭೂಮಿಗೆ ನೋಟಿಫಿಕೇಶನ್ ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಈ ಬಗ್ಗೆ ತಮ್ಮ ಬಳಿ ಹೆಚ್ಚಿನ ಮಾಹಿತಿ ಇಲ್ಲ ಎಂದರು. ಮೈಸೂರಿನಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಕೆಐಡಿಬಿ ಭೂಮಿಗೆ ನೋಟಿಫಿಕೇಶನ್ ನೀಡಿರಬಹುದು. ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Navasamaja