Dailyhunt Logo
  • Light mode
    Follow system
    Dark mode
    • Play Story
    • App Story
GOOD NEWS: ರಾಜ್ಯದ ಪಿಂಚಣಿ ಫಲಾನುಭವಿಗಳಿಗೆ ಭರ್ಜರಿ ಸುದ್ದಿ

GOOD NEWS: ರಾಜ್ಯದ ಪಿಂಚಣಿ ಫಲಾನುಭವಿಗಳಿಗೆ ಭರ್ಜರಿ ಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು (State Government) ಪಿಂಚಣಿ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ (Good News) ನೀಡಿದ್ದು, ಈ ಹಿಂದೆ ₹32 ಸಾವಿರ ಇದ್ದ ಆದಾಯ ಮಿತಿಯನ್ನು ₹1.20 ಲಕ್ಷಕ್ಕೆ ಹೆಚ್ಚಿಸುವ ಮೂಲಕ, ಆದಾಯ ಮಿತಿಯಿಂದ ಹೊರಗುಳಿದಿದ್ದ ಅರ್ಹರಿಗೆ ಮತ್ತೆ ಪಿಂಚಣಿ ಸೌಲಭ್ಯ ದೊರೆಯುವ ಅವಕಾಶ ಕಲ್ಪಿಸಲಾಗಿದೆ.

ಈ ಬಗ್ಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ಅರ್ಹ ಫಲಾನುಭವಿಗಳಿಗೆ ನಿಗದಿಯಾದ ಸವಲತ್ತು ಯಾವುದೇ ಕಾರಣಕ್ಕೂ ಅವರ ಕೈತಪ್ಪಬಾರದು ಎಂಬ ಕಾಳಜಿಯಿಂದ ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ ₹32 ಸಾವಿರ ಇದ್ದ ಆದಾಯ ಮಿತಿಯನ್ನು ₹1.20 ಲಕ್ಷಕ್ಕೆ ಹೆಚ್ಚಿಸುವ ಮೂಲಕ, ಆದಾಯ ಮಿತಿಯಿಂದ ಹೊರಗುಳಿದಿದ್ದ ಅರ್ಹರಿಗೆ ಮತ್ತೆ ಪಿಂಚಣಿ ಸೌಲಭ್ಯ ದೊರೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೂಕ್ತ ದಾಖಲೆಗಳಿಲ್ಲದ ಹಾಗೂ ವಯೋಮಿತಿ ಪೂರೈಸದ ಅರ್ಜಿಗಳನ್ನು ಪರಿಶೀಲಿಸಿ ಅನರ್ಹರನ್ನು ಹೊರಗಿಡುವ ಮೂಲಕ ವ್ಯವಸ್ಥೆಯನ್ನು ಮತ್ತಷ್ಟು ಶುದ್ಧೀಕರಿಸಲಾಗುವುದು. ಜನರ ಬದುಕಿಗೆ ನೆರವಾಗುವ ಪ್ರತಿಯೊಂದು ನಿರ್ಧಾರದಲ್ಲೂ ಸಾಮಾಜಿಕ ನ್ಯಾಯ ಮತ್ತು ಜನಹಿತಕ್ಕೆ ಆದ್ಯತೆ ನೀಡುವುದು ನಮ್ಮ ಸರ್ಕಾರದ ಬದ್ಧತೆ. ಅರ್ಹರಿಗೆ ಸೌಲಭ್ಯ ತಲುಪಿಸುವುದರ ಜೊತೆಗೆ ವ್ಯವಸ್ಥೆಯ ಪಾರದರ್ಶಕತೆ ಕಾಪಾಡಿಕೊಂಡು, ಜನರ ವಿಶ್ವಾಸಕ್ಕೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ನಮ್ಮ ಕಾರ್ಯ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಸಂದರ್ಭದಲ್ಲಿ ಅವುಗಳಿಗೆ ಹೆಚ್ಚಿನ ಹಣ ಅಗತ್ಯವಾಗುತ್ತದೆ ಎಂಬುದು ಸರ್ಕಾರಕ್ಕೆ ಮೊದಲಿನಿಂದಲೂ ತಿಳಿದಿತ್ತು. ಪ್ರಣಾಳಿಕೆ ಸಿದ್ಧಪಡಿಸುವಾಗಲೇ ಯೋಜನೆಗಳಿಗೆ ಎಷ್ಟು ಹಣ ಬೇಕಾಗಬಹುದು ಎಂಬುದರ ಕುರಿತು ಅಂದಾಜು ಮಾಡಲಾಗಿತ್ತು. ಆರಂಭದಲ್ಲಿ ಸುಮಾರು ₹40ರಿಂದ ₹45 ಸಾವಿರ ಕೋಟಿ ವೆಚ್ಚವಾಗಬಹುದು ಎಂಬ ಅಂದಾಜಿತ್ತು. ನಂತರ ವಾಸ್ತವಿಕ ವೆಚ್ಚ ಸುಮಾರು ₹50 ಸಾವಿರ ಕೋಟಿಗೂ ಹೆಚ್ಚಾಗಿದೆ. ಆದರೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿರ್ಧಾರವನ್ನು ಪ್ರಜ್ಞಾಪೂರ್ವಕವಾಗಿಯೇ ಕೈಗೊಳ್ಳಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಹಣಕಾಸಿನ ಮೇಲೆ ಒತ್ತಡ ಇರುವುದನ್ನು ಯಾರೂ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ಕಳೆದ ಮೂರು ವರ್ಷಗಳಿಂದ ಸರ್ಕಾರ ಈ ಹಣಕಾಸಿನ ಬದ್ಧತೆಯನ್ನು ನಿರ್ವಹಿಸಿಕೊಂಡು ಬಂದಿದೆ. ಮುಂದಿನ ಎರಡು ವರ್ಷಗಳಲ್ಲೂ ಅದನ್ನು ನಿರ್ವಹಿಸುವ ಸಾಮರ್ಥ್ಯ ಸರ್ಕಾರಕ್ಕಿದೆ ಎಂದರು.

ಮುಖ್ಯಮಂತ್ರಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದು, ಪಕ್ಷದ ನಾಯಕರನ್ನು ಭೇಟಿಯಾಗುವುದರ ಜೊತೆಗೆ ಕೇಂದ್ರದ ಕೆಲವು ಸಚಿವರನ್ನೂ ಭೇಟಿಯಾಗಲಿದ್ದಾರೆ. ಬರ ಪರಿಹಾರ ಹಾಗೂ ವಿಪತ್ತು ನಿರ್ವಹಣೆಯ ವಿಚಾರವಾಗಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಇದರ ಜೊತೆಗೆ ನೀರಾವರಿ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಗತ್ಯಗಳನ್ನು ವಿವರಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

R VEERAMANI: ಉದ್ಯಮಿ ವೀರಮಣಿ ವಿರುದ್ಧ ಮತ್ತೊಂದು ಪೋಕ್ಸೊ ಪ್ರಕರಣ ದಾಖಲು

Dailyhunt
Disclaimer: This content has not been generated, created or edited by Dailyhunt. Publisher: Navasamaja