ai image
ಬೆಂಗಳೂರು: ರಾಜ್ಯದಲ್ಲಿ ಶಾಶ್ವತ ವಿದ್ಯುತ್ ಸಂಪರ್ಕ (Permanent Electricity Connection) ಪಡೆಯಲು ಬಯಸುವ ಸಾರ್ವಜನಿಕರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಆಗಸ್ಟ್ 15ರವರೆಗೆ ವಿಸ್ತರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಹಿಂದಿನ ನಿಯಮದ ಪ್ರಕಾರ, ಜೂನ್ 30 ರಿಂದ ಕೇವಲ 15 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಸಾರ್ವಜನಿಕರ ಅನುಕೂಲಕ್ಕಾಗಿ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದ ನಿರ್ಣಯಕ್ಕೆ ಅಗತ್ಯ ಮಾರ್ಪಾಡುಗಳನ್ನು ಮಾಡಲಾಗಿದ್ದು, ಈಗ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ಆಗಸ್ಟ್ 15 ರವರೆಗೆ ಮುಂದೂಡಲಾಗಿದೆ. ಗ್ರಾಮೀಣ ಭಾಗದ ಕೃಷಿಕರಿಗೆ ಮತ್ತೊಂದು ಸೌಲಭ್ಯ ಸರ್ಕಾರದ ಈ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ರೈತರು ಹಾಗೂ ಕೃಷಿ ಉದ್ಯಮಿಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಎದುರಾಗುತ್ತಿದ್ದ ದೊಡ್ಡ ನಿಯಮಾವಳಿಯೊಂದು ಸರಳಗೊಂಡಂತಾಗಿದೆ. : VIRAL: ಆಟೋ ಚಾಲಕನಿಗೆ ತನ್ನ ಲ್ಯಾಂಬೋರ್ಗಿನಿ ಕಾರ್ ಕೀ ಕೊಟ್ಟು ಆಟೋ ಹತ್ತಿದ ಕೋಟ್ಯಾಧಿಪತಿ!-VIDEO
ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾತ್ರವಲ್ಲದೆ, ಗ್ರಾಮೀಣ ಭಾಗದ ಜನರಿಗೆ ಸರ್ಕಾರ ಮತ್ತೊಂದು ಪ್ರಮುಖ ವಿನಾಯಿತಿಯನ್ನು ಪ್ರಕಟಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಾಗುವ ಕೋಳಿ ಸಾಕಾಣಿಕೆ ಕೇಂದ್ರಗಳು ಹಾಗೂ ಕೃಷಿ ಸಂಬಂಧಿತ ಇತರೆ ಚಟುವಟಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಇನ್ನು ಮುಂದೆ 'ಸ್ವಾಧೀನಾನುಭವ ಪ್ರಮಾಣ ಪತ್ರ' (Possession Certificate) ಹಾಜರುಪಡಿಸುವುದು ಕಡ್ಡಾಯವಲ್ಲ. ಈ ನಿಯಮದಿಂದ ವಿನಾಯಿತಿ ನೀಡಿರುವುದಾಗಿ ಸರ್ಕಾರ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

