Dailyhunt
GOOD NEWS: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪಾಸ್‌ ಅವಧಿ ವಿಸ್ತರಣೆ

GOOD NEWS: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪಾಸ್‌ ಅವಧಿ ವಿಸ್ತರಣೆ

Navasamaja.com 2 weeks ago

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ (Students) ಅನುಕೂಲವಾಗಲಿ ಎನ್ನುವ ಕಾರಣದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಹತ್ವದ ನಿರ್ಧಾರ (Good News) ಮಾಡಿದ್ದು, ವಿದ್ಯಾರ್ಥಿಗಳ ಬಸ್‌ ಪಾಸ್‌ಗಳ ಮಾನ್ಯತೆ ಅವಧಿಯನ್ನ ಹೆಚ್ಚು ಮಾಡಿದೆ.

ಏಪ್ರಿಲ್‌ವರೆಗೂ ಇರಲಿದೆ ಪಾಸ್‌ ಮಾನ್ಯತೆ

ಹೌದು, 1 ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿ ಬಸ್ ಪಾಸ್‌ಗಳ ಮಾನ್ಯತಾ ಅವಧಿಯನ್ನು ವಿಸ್ತರಣೆ ಮಾಡಲು ಬಿಎಂಟಿಸಿ ನಿರ್ಧಾರ ಮಾಡಿದ್ದು, ಇದರಿಂದ ಬಹಳಷ್ಟು ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ. ಸಾಮಾನ್ಯವಾಗಿ ಪ್ರತಿ ವರ್ಷದ ವಿದ್ಯಾರ್ಥಿ ಬಸ್ ಪಾಸ್‌ಗಳ ಅವಧಿಯು ಮಾರ್ಚ್ 31ಕ್ಕೆ ಮುಗಿಯುತ್ತದೆ. ಈ ಬಾರಿ ಸಹ ಮಾರ್ಚ್‌ 31ಕ್ಕೆ ಕೊನೆಯಾಗಿತ್ತು. ಆದರೆ ಈ ವರ್ಷ ಏಪ್ರಿಲ್‌ 10ರ ವರೆಗೆ ತರಗತಿಗಳನ್ನ ಮಾಡಲಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಕಾರಣದಿಂದ ಪಾಸ್‌ ಮಾನ್ಯತೆಯನ್ನ ವಿಸ್ತರಣೆ ಮಾಡಲಾಗುತ್ತಿದೆ.

ಪಾಸ್‌ ಮಾನ್ಯತೆ ವಿಸ್ತರಣೆ ನಿಯಮಗಳೇನು?

ಬಿಎಂಟಿಸಿ ನೀಡಿರುವ ಮಾಹಿತಿಗಳ ಪ್ರಕಾರ, ಈ ಪಾಸ್‌ ಮಾನ್ಯತೆ ವಿಸ್ತರಣೆ ಕೇವಲ 1 ರಿಂದ 9ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ಆಗುತ್ತದೆ. ವಿದ್ಯಾರ್ಥಿಗಳು ಹಳೆಯ ಬಸ್‌ ತೋರಿಸಿ ಏಪ್ರಿಲ್‌ 10ರ ವರೆಗೆ ಪ್ರಯಾಣ ಮಾಡಬಹುದು. ವಿದ್ಯಾರ್ಥಿಗಳು ಮನೆಯಿಂದ ಶಾಲೆಗೆ ಪ್ರಯಾಣ ಮಾಡಬಹುದಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ನೀಡಿದ್ದ ಬಿಎಂಟಿಸಿ
ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯದಲ್ಲಿ ಸಹ ಬಿಎಂಟಿಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ನೀಡಿತ್ತು. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗಲು ಹಾಗೂ ಮರಳಲು ಬಿಎಂಟಿಸಿ ಸಾಮಾನ್ಯ ಬಸ್ ಸೇವೆಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ನೀಡಿತ್ತು. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಬಿಎಂಟಿಸಿ ವಿಶೇಷ ಕ್ರಮಗಳನ್ನು ತೆಗೆದುಕೊಂಡಿತ್ತು.

Dailyhunt
Disclaimer: This content has not been generated, created or edited by Dailyhunt. Publisher: Navasamaja