Dailyhunt Logo
  • Light mode
    Follow system
    Dark mode
    • Play Story
    • App Story
GRUHA LAKSHMI SCHEME: ಗೃಹಲಕ್ಷ್ಮಿ ಯೋಜನೆಗೆ 3ರ ಸಂಭ್ರಮ: ಮನೆಯೊಡತಿಯರಿಗೆ ಸಿಎಂ ವಿಶೇಷ ಮನವಿ-VIDEO

GRUHA LAKSHMI SCHEME: ಗೃಹಲಕ್ಷ್ಮಿ ಯೋಜನೆಗೆ 3ರ ಸಂಭ್ರಮ: ಮನೆಯೊಡತಿಯರಿಗೆ ಸಿಎಂ ವಿಶೇಷ ಮನವಿ-VIDEO

Navasamaja.com 6 days ago

ಬೆಂಗಳೂರು: ನಾಡಿನ ಮಹಿಳೆಯರಿಗೆ ಆರ್ಥಿಕ ಶಕ್ತಿಯಾಗಿ, ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ (Congress) ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯು (Gruha Lakshmi Scheme) ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಫಲಾನುಭವಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದ ಈ ಪ್ರಮುಖ ಯೋಜನೆಯಡಿ ರಾಜ್ಯದ ಸುಮಾರು 1 ಕೋಟಿ 22 ಲಕ್ಷ ಗೃಹಿಣಿಯರ ಖಾತೆಗೆ ಪ್ರತಿ ತಿಂಗಳು ನೇರವಾಗಿ 2,000 ರೂಪಾಯಿಗಳನ್ನು ಜಮೆ ಮಾಡಲಾಗುತ್ತಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ಸ್ವಾಭಿಮಾನವನ್ನು ಹೆಚ್ಚಿಸಿದೆ ಎಂದಿರುವ ಸಿಎಂ, ಯೋಜನೆಯ ಪ್ರಯೋಜನವು ಯಾವುದೇ ಅರ್ಹ ಫಲಾನುಭವಿಗಳಿಗೆ ತಪ್ಪಬಾರದು ಎಂಬ ಉದ್ದೇಶದಿಂದ ಸರ್ಕಾರ ಹೊಸ ಹೆಜ್ಜೆಯೊಂದನ್ನು ಇಟ್ಟಿದೆ.

ಇನ್ನುಮುಂದೆ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸದಸ್ಯರು ನೇರವಾಗಿ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ. ಈ ವೇಳೆ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಹೊಸ ಅರ್ಜಿಗಳನ್ನು ನೀಡುವುದರ ಜೊತೆಗೆ, ಅಗತ್ಯ ಹೊಸ ದಾಖಲೆಗಳು ಹಾಗೂ ಮೊಬೈಲ್ ಸಂಖ್ಯೆಗಳ ಕುರಿತಾದ ಹೊಸ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.

ಮನೆಯ ಬಾಗಿಲಿಗೆ ಬರುವ ಗ್ಯಾರಂಟಿ ಸಮಿತಿ ಸದಸ್ಯರಿಗೆ ಸೂಕ್ತ ಹಾಗೂ ಅಗತ್ಯ ಮಾಹಿತಿಯನ್ನು ನೀಡಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಯೋಜನೆಯ ಸೌಲಭ್ಯ ನಿರಂತರವಾಗಿ ಮುಂದುವರಿಯಲು ಅಗತ್ಯವಿರುವ ವಿವರಗಳನ್ನು ತಪ್ಪದೇ ಒದಗಿಸಿ, ಗೃಹಲಕ್ಷ್ಮಿ ಯೋಜನೆಯ ಲಾಭ ನಿಮ್ಮ ಕೈತಪ್ಪದಂತೆ ನೋಡಿಕೊಳ್ಳಿ ಎಂದು ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮಹಿಳೆಯರಲ್ಲಿ ಕೋರಿದ್ದಾರೆ.

ಮನೆಯ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ.

ಪ್ರತಿ ತಿಂಗಳು 2,000 ರೂಪಾಯಿಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರ ನೇರವಾಗಿ ಜಮೆ ಮಾಡುತ್ತಿದ್ದು, ನಾಡಿನ ಅನೇಕ ಫಲಾನುಭವಿಗಳು ಯೋಜನೆಯ ಹಣವನ್ನು ಕೂಡಿಟ್ಟ ಸ್ವಯಂ ಉದ್ಯೋಗ ಕಲ್ಪಿಸಿಕೊಂಡರೆ, ಇನ್ನು ಅನೇಕರು ತಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ದೈನಂದಿನ ಅಗತ್ಯತೆಗಳನ್ನು ಪೂರೈಸಿಕೊಳ್ಳುತ್ತಿರುವುದು ವಿಶೇಷ.

Dailyhunt
Disclaimer: This content has not been generated, created or edited by Dailyhunt. Publisher: Navasamaja