Dailyhunt Logo
  • Light mode
    Follow system
    Dark mode
    • Play Story
    • App Story
HD KUMARASWAMY: ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ, ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಹೆಚ್​​​​​​ಡಿಕೆ

HD KUMARASWAMY: ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ, ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಹೆಚ್​​​​​​ಡಿಕೆ

Navasamaja.com 4 months ago

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಶೀಲನೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ನಿನ್ನೆಯಷ್ಟೇ (ಜುಲೈ 02) ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H. D. Kumaraswamy), ಇಂದು (ಜುಲೈ 03) ಮತ್ತೊಂದು ಸ್ಫೋಟಕ ವಿಡಿಯೋ (video) ಬಿಡುಗಡೆ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚುನಾವಣಾ ಅಕ್ರಮಗಳ ದೃಶ್ಯಾವಳಿಗಳನ್ನು ಬಹಿರಂಗಪಡಿಸಿದರು. ಈ ವಿಡಿಯೋದಲ್ಲಿ ಬಿಎಲ್‌ಒಗಳು (ಮತಗಟ್ಟೆ ಮಟ್ಟದ ಅಧಿಕಾರಿಗಳು) ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರ ಭಾವಚಿತ್ರವಿರುವ ಪುಸ್ತಕಗಳನ್ನು ಹಿಡಿದುಕೊಂಡು ಕಾರ್ಯಾಚರಣೆ ನಡೆಸುತ್ತಿರುವುದು ಕಂಡುಬಂದಿದೆ.

ರಾಜ್ಯ ಸರ್ಕಾರವು ಅಧಿಕಾರಿಗಳನ್ನು ತನ್ನ ಗುಲಾಮರಂತೆ ಬಳಸಿಕೊಳ್ಳುತ್ತಿದೆ. ಕೆಪಿಸಿಸಿಯ ಹೊಸ ಅಧ್ಯಕ್ಷರು ರಾಮಮಂದಿರದ ಬಗ್ಗೆ ಮಾತನಾಡುತ್ತಾ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ, ಆದರೆ ಇಲ್ಲಿ ತೆರೆಮರೆಯಲ್ಲಿ ಮತದಾರರ ಹುಂಡಿಯನ್ನೇ ಲೂಟಿ ಮಾಡಲು ಸರ್ಕಾರ ಸಂಚು ರೂಪಿಸಿದೆ. ಇದು ಸಂವಿಧಾನವನ್ನೇ ಬುಡಮೇಲು ಮಾಡುವ ಕೆಲಸ ಎಂದು ಕಿಡಿಕಾರಿದರು.

ಮತದಾರರ ಪಟ್ಟಿಯ ಈ ಅಕ್ರಮದ ಕುರಿತು ರಾಜ್ಯದ ವಿವಿಧ ಭಾಗಗಳಿಂದ ನನಗೆ ಕರೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಲು ಸಮಯಾವಕಾಶ ಕೋರಲಿದ್ದೇನೆ. ಅಷ್ಟೇ ಅಲ್ಲದೆ, ಇಂದು ರಾಜ್ಯ ಚುನಾವಣಾ ಆಯುಕ್ತರನ್ನು ಖುದ್ದಾಗಿ ಭೇಟಿ ಮಾಡಿ ದೂರು ನೀಡಲಿದ್ದೇವೆ ಎಂದರು.

ಭಾರತೀಯ ಚುನಾವಣಾ ಆಯೋಗದ (ECI) ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಹೊರಡಿಸಿರುವ ಕಡಕ್ ಆದೇಶದ ಕುರಿತು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಅನ್ಬುಕುಮಾರ್ ಅವರು ಕೇವಲ ಕಚೇರಿಯಲ್ಲಿ ಕುಳಿತು ಆದೇಶ ಹೊರಡಿಸಿದರೆ ಸಾಕಾ? ಗ್ರೌಂಡ್ ರಿಯಾಲಿಟಿ ಏನಿದೆ ಎಂಬುದನ್ನು ನೋಡಬೇಕು. ಈ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನಾವು ಈಗಾಗಲೇ ನೀಡಿರುವ ದೂರಿನ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ? ಬೆಳಿಗ್ಗೆಯಿಂದ ಚುನಾವಣಾ ಆಯುಕ್ತರು ಕಚೇರಿಗೇ ಬಂದಿಲ್ಲ ಎಂದು ಹೆಚ್‌ಡಿಕೆ ಪ್ರಶ್ನಿಸಿದರು.

NRI: ಎನ್‌ಆರ್‌ಐಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ವಿಳಂಬ! ಡಿಸಿಎಂ ನೇತೃತ್ವದ ಸಮಿತಿ ರಚನೆ

Dailyhunt
Disclaimer: This content has not been generated, created or edited by Dailyhunt. Publisher: Navasamaja