Dailyhunt Logo
  • Light mode
    Follow system
    Dark mode
    • Play Story
    • App Story
KUDA: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.89 ಕೋಟಿ ಸೈಟ್ ಅಕ್ರಮ, ಹಲವರ ಬಂಧನ!

KUDA: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.89 ಕೋಟಿ ಸೈಟ್ ಅಕ್ರಮ, ಹಲವರ ಬಂಧನ!

Navasamaja.com 2 weeks ago

ಕೊಪ್ಪಳ: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ನಡೆದ ₹8.89 ಕೋಟಿ ಸೈಟ್ ಅಕ್ರಮ ಮತ್ತು ಹಣ ವಂಚನೆ ಪ್ರಕರಣದಲ್ಲಿ ಪ್ರಮುಖ ರೂವಾರಿ ಹೊರಗುತ್ತಿಗೆ ನೌಕರ ರವೀಂದ್ರಕುಮಾರ್, ಪತ್ನಿ ರಮಾ, ಸಹೋದರ ಅನಿಲ್ ಕುಮಾರ್ ಬಂಧನವಾಗಿದೆ.

ಕೊಪ್ಪಳದ ಕಿಮ್ಸ್ (KIMS) ಹಿಂಭಾಗದ ಸರೋಜಮ್ಮ ಬಡಾವಣೆಯಲ್ಲಿ ಸೈಟ್ ನೀಡುವುದಾಗಿ ಹೇಳಿ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್, ಆತನ ಪತ್ನಿ ಹಾಗೂ ಸಹೋದರ ಸೇರಿ ಸುಮಾರು 40ಕ್ಕೂ ಹೆಚ್ಚು ಅಕೌಂಟ್‌ಗಳಿಗೆ ಹಣ ವರ್ಗಾಯಿಸಿಕೊಂಡಿದ್ದ.

ರವೀಂದ್ರನ ಸಹೋದರ ಅನಿಲ್ ಕುಮಾರ್ ಹೆಸರಿಗೆ 1.5 ಕೋಟಿ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿತ್ತು. ಇನ್ನು ರವೀಂದ್ರನ ಪತ್ನಿ ರಮಾ ಅಕೌಂಟ್‌ನಿಂದ 30 ಲಕ್ಷ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿತ್ತು.

ಗಂಗಾವತಿಯ ಬನಶಂಕರಿ ಎಂಬ ಮಹಿಳೆ ಹಣ ಕಳೆದುಕೊಂಡು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದಾಗ, ಅನಧಿಕೃತ ಅಕೌಂಟ್‌ಗಳಿಗೆ ಪ್ರಾಧಿಕಾರದ ಅಧಿಕೃತ ಖಾತೆಯಿಂದಲೇ ಹಣ ವರ್ಗಾವಣೆಯಾಗಿರುವುದು ಬಯಲಾಗಿತ್ತು.

ಇದೇ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಪ್ರಾಧಿಕಾರದ ಮಾಜಿ ಆಯುಕ್ತ ಯೋಗಾನಂದ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರಿಗಾಗಿಯೂ ಪೊಲೀಸರು ಜಾಲ ಬೀಸಿದ್ದಾರೆ. ಅಕ್ರಮ ಎಸಗಿದ ಬಳಿಕ ತಮಿಳುನಾಡು, ಮಂತ್ರಾಲಯದ ವಿವಿಧ ದೇವಸ್ಥಾನಗಳಲ್ಲಿ 'ಟೆಂಪಲ್ ರನ್' ನಡೆಸುತ್ತಿದ್ದ ರವೀಂದ್ರ ಕುಮಾರ್ ಹಾಗೂ ಆತನ ಪತ್ನಿಯನ್ನು ಚಿತ್ರದುರ್ಗದ ಬಳಿ ಕೊಪ್ಪಳ ನಗರ ಪೊಲೀಸರು ಬಂಧಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja