Dailyhunt
MALLIKARJUN KHARGE: ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ, ಖರ್ಗೆಗೆ ಚುನಾವಣಾ ಆಯೋಗ ನೋಟೀಸ್

MALLIKARJUN KHARGE: ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ, ಖರ್ಗೆಗೆ ಚುನಾವಣಾ ಆಯೋಗ ನೋಟೀಸ್

Navasamaja.com 2 weeks ago

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಭಾರತೀಯ ಚುನಾವಣಾ ಆಯೋಗ ನೋಟಿಸ್ (Breaking) ಜಾರಿ ಮಾಡಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ, ಖರ್ಗೆ ಅವರು ಪ್ರಧಾನಿ ಮೋದಿಯನ್ನು 'ಭಯೋತ್ಪಾದಕ' ಎಂದು ಕರೆದಿದ್ದರಿಂದ ರಾಜಕೀಯ ವಲಯದಲ್ಲಿ ತೀವ್ರ ವಿವಾದ ಭುಗಿಲೆದ್ದಿದೆ.

ಮೋದಿ ಭಯೋತ್ಪಾದಕ ಎಂದಿದ್ದ ಖರ್ಗೆ
ತಮಿಳುನಾಡಿನಲ್ಲಿ ಎಐಎಡಿಎಂಕೆ (AIADMK) ವಿರುದ್ಧ ವಾಗ್ದಾಳಿ ನಡೆಸುವಾಗ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಎಐಎಡಿಎಂಕೆ ಪಕ್ಷವು ಮೋದಿ ಅವರೊಂದಿಗೆ ಹೇಗೆ ಮೈತ್ರಿ ಮಾಡಿಕೊಳ್ಳಬಹುದು ಎಂದು ಪ್ರಶ್ನಿಸಿದ್ದರು. ಈ ವೇಳೆ ಅವರು ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಲ್ಲದೆ, ಅವರು ಸಮಾನತೆ ಮತ್ತು ನ್ಯಾಯವನ್ನು ನಂಬುವುದಿಲ್ಲ ಎಂದು ಆರೋಪಿಸಿದ್ದರು. ಇಂತಹ ವ್ಯಕ್ತಿಗಳೊಂದಿಗೆ ಕೈಜೋಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಖರ್ಗೆ ಟೀಕಿಸಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು ಇದೀಗ ನೋಟಿಸ್ ನೀಡಿದ್ದು, ಈ ವಿಚಾರ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದೆ.

ಹೇಳಿಕೆಯನ್ನು ಸಮರ್ಥಿಸಿದ ಖರ್ಗೆ
ತಮಿಳುನಾಡಿನ ವೇಲಾಚೇರಿಯಲ್ಲಿ ನಡೆದ ಸಮಾವೇಶದಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ತೀವ್ರವಾಗಿ ಟೀಕಿಸಿದ ಖರ್ಗೆ, ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಮೋದಿಯವರಂತಹ ಒಬ್ಬ ಭಯೋತ್ಪಾದಕನ ಜೊತೆ ಎಐಎಡಿಎಂಕೆ ಹೇಗೆ ಕೈಜೋಡಿಸಲು ಸಾಧ್ಯ? ಎಂದು ಪ್ರಶ್ನಿಸಿದರು. ಖರ್ಗೆ ಅವರ ಈ ಕಠಿಣ ಪದ ಬಳಕೆ ತಕ್ಷಣವೇ ವಿವಾದದ ಸ್ವರೂಪ ಪಡೆದುಕೊಂಡಿತು. ಪರಿಸ್ಥಿತಿಯನ್ನು ಅರಿತ ಅವರು ಕೂಡಲೇ ಸ್ಪಷ್ಟನೆ ನೀಡಿ, ನಾನು ಭಯೋತ್ಪಾದಕ ಎಂದರೆ ಅವರು ರಾಜಕೀಯವಾಗಿ ಎಲ್ಲರನ್ನೂ ಬೆದರಿಸುತ್ತಾರೆ ಎಂಬ ಅರ್ಥದಲ್ಲಿ ಹೇಳಿದ್ದೇನೆಯೇ ಹೊರತು ಬೇರೇನೂ ಇಲ್ಲ ಎಂದು ಸಮರ್ಥಿಸಿಕೊಂಡರು.

ಇದೇ ವೇಳೆ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿದ ಅವರು, ಎಐಎಡಿಎಂಕೆಯನ್ನು ಬಿಜೆಪಿಯ ಗುಲಾಮಗಿರಿಯಲ್ಲಿ ಬಿದ್ದಿದ್ದಾರೆ ಎಂದರು. ಬಿಜೆಪಿಯ ಮುಂದೆ ತಲೆಬಾಗದ ನಾಯಕತ್ವ ಕೇವಲ ಎಂ.ಕೆ. ಸ್ಟಾಲಿನ್ ಅವರಿಂದ ಮಾತ್ರ ಸಾಧ್ಯ ಎಂದ ಖರ್ಗೆ, ಎಐಎಡಿಎಂಕೆ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸುತ್ತಿರುವ ಬಿಜೆಪಿಯ ನಿಲುವನ್ನು ಟೀಕಿಸಿದ ಅವರು, ಇದು ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿಯಾದ ತಮಿಳುನಾಡಿನಂತಹ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಶಿಕ್ಷೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Navasamaja