Dailyhunt Logo
  • Light mode
    Follow system
    Dark mode
    • Play Story
    • App Story
PRAJWAL REVANNA: 2 ವರ್ಷಗಳ ಬಳಿಕ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಫ್ಲೆಕ್ಸ್: ಹುಟ್ಟುಹಬ್ಬಕ್ಕೆ ಶುಭಕೋರಿದ ಬೆಂಬಲಿಗರು!: VIDEO

PRAJWAL REVANNA: 2 ವರ್ಷಗಳ ಬಳಿಕ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಫ್ಲೆಕ್ಸ್: ಹುಟ್ಟುಹಬ್ಬಕ್ಕೆ ಶುಭಕೋರಿದ ಬೆಂಬಲಿಗರು!: VIDEO

Navasamaja.com 5 days ago

ಹಾಸನ: ಅತ್ಯಾಚಾರ ಆರೋಪ (Case)ಸಾಬೀತಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಫ್ಲೆಕ್ಸ್‌ಗಳು (Breaking) ಸುಮಾರು ಎರಡು ವರ್ಷಗಳ ಸುದೀರ್ಘ ವಿರಾಮದ ಬಳಿಕ ಹಾಸನ ಜಿಲ್ಲೆಯಲ್ಲಿ ಮತ್ತೆ ಪ್ರತ್ಯಕ್ಷವಾಗಿವೆ.

ಇಂದು ಪ್ರಜ್ವಲ್ ರೇವಣ್ಣ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಜಿಲ್ಲೆಯ ವಿವಿಧೆಡೆ ದೊಡ್ಡ ದೊಡ್ಡ ಫ್ಲೆಕ್ಸ್‌ಗಳನ್ನು (Birthday Plex) ಅಳವಡಿಸಿ ಶುಭಾಶಯ ಕೋರಿರುವುದು ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್

ಹೊಳೆನರಸೀಪುರ ಪಟ್ಟಣದ ಪ್ರಮುಖ ಕೇಂದ್ರಗಳಾದ ಅಂಬೇಡ್ಕರ್ ವೃತ್ತ ಹಾಗೂ ಮಹಾತ್ಮ ಗಾಂಧಿ ವೃತ್ತಗಳಲ್ಲಿ ಪ್ರಜ್ವಲ್ ರೇವಣ್ಣ ಅವರ ಭಾವಚಿತ್ರವಿರುವ ಬೃಹತ್ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ಸಂಸದರಾಗಿದ್ದ ಅವಧಿಯಲ್ಲಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿದ ಗಂಭೀರ ಆರೋಪಗಳಡಿ ಬಂಧನಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ, ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದ್ಯ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರ ಜಿಲ್ಲೆಯಲ್ಲಿ ಎಲ್ಲಿಯೂ ಅವರ ಫ್ಲೆಕ್ಸ್ ಅಥವಾ ಬ್ಯಾನರ್‌ಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಅವರ ಹುಟ್ಟುಹಬ್ಬದ ನೆಪದಲ್ಲಿ ಮತ್ತೆ ರಸ್ತೆಬದಿಯಲ್ಲಿ ಬ್ಯಾನರ್‌ಗಳು ರಾರಾಜಿಸುತ್ತಿರುವುದು ಸಾರ್ವಜನಿಕರ ಗಮನ ಸೆಳೆದಿದೆ.‌

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಕೇಸ್, ನವೀನ್ ಗೌಡ ಸೇರಿ 8 ಜನರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)ಅವರ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಆರೋಪಿಗಳಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಪ್ರಮುಖ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಶನಿವಾರ ಮಹತ್ವದ ಆದೇಶ ನೀಡಿದೆ.

8 ಆರೋಪಿಗಳಿಗೆ ಕೋರ್ಟ್‌ ಸಮನ್ಸ್‌ ಜಾರಿ
ಮಾಹಿತಿ ತಂತ್ರಜ್ಞಾನ ಕಾಯ್ದೆಯ (IT Act) ಸೆಕ್ಷನ್ 67ಎ ಹಾಗೂ ಐಪಿಸಿ ಸೆಕ್ಷನ್ 509ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ಪರಿಶೀಲಿಸಿದ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಆರೋಪಿಗಳಿಗೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್ ನೀಡಲು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ (A2) ನವೀನ್ ಗೌಡ ಸೇರಿದಂತೆ ಹೆಚ್.ಪಿ. ಲಿಖಿತ್ (A3), ಎಂ.ಜೆ. ನಿಶಾಂತ್ (A4), ಎಸ್.ಕೆ. ಕಿರಣ್ (A5), ಎಂ.ಜಿ. ಶರತ್ (A6), ಡಿ.ಎನ್. ತೇಜಸ್ (A7), ಸಿ. ಗಗನ್ ಕುಮಾರ್ (A8) ಮತ್ತು ಹೆಚ್. ರೇವಂತ್ (A9) ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja