ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಸರ್ಕಾರದ ವಿಚಾರದಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok ) ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank kharge ) ತಿರುಗೇಟು ನೀಡಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 'ಮರಿ ಖರ್ಗೆ' ಪ್ರಶ್ನೆಗಳ ಬಗ್ಗೆ ಚಿಂತಿಸುವ ಬದಲು ಬಿಜೆಪಿ ನಾಯಕರು ಉತ್ತರಿಸಬೇಕಾದ ಪ್ರಮುಖ ವಿಷಯಗಳು ಹಲವಿವೆ ಎಂದು ಸವಾಲು ಹಾಕಿದ್ದಾರೆ. ವಿಪಕ್ಷ ನಾಯಕರ ವಿರುದ್ಧ ಕಿಡಿಕಾರಿರುವ ಸಚಿವರು, ಆರ್. ಅಶೋಕ್ ಅವರ ಕುಟುಂಬದ ಸದಸ್ಯರು ಏಕ ಇನ್ನೂ 'ಗಣವೇಶ' ಧರಿಸಿಲ್ಲ, ಗೋಶಾಲೆಯಲ್ಲಿ ಗೋಮೂತ್ರ ಸೇವಿಸುತ್ತಿಲ್ಲ ಹಾಗೂ ಧರ್ಮರಕ್ಷಕರಾಗಿ ಬೀದಿಗೆ ಇಳಿದಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿರಿ ಅಶೋಕ್ ಅವರು ತಮ್ಮ ಸ್ವಂತ ವಿಚಾರಗಳ ಬಗ್ಗೆ ಮೌನ ವಹಿಸಿ, ಇತರರ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ. ಇದೇ ವೇಳೆ ಕೆಪಿಎಸ್‌ಸಿ (KPSC) ನೇಮಕಾತಿ ವಿಚಾರ ಹಾಗೂ ಕನ್ನಾಳೆ ಪ್ರಕರಣವನ್ನು ಪ್ರಸ್ತಾಪಿಸಿರುವ ಖರ್ಗೆ, ಬಿಜೆಪಿ ಆಡಳಿತಾವಧಿಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ನಾಯಕರು ಎಷ್ಟು ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ಆಗ್ರಹಿಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಹಾಗೂ ಬಸವರಾಜ ಕನ್ನಾಳೆ ಪ್ರಕರಣಗಳ ಸತ್ಯಾಸತ್ಯತೆಯನ್ನು ಜನರ ಮುಂದೆ ಇಡುವ ಧೈರ್ಯ ಬಿಜೆಪಿಗೆ ಇದೆಯೇ ಎಂದು ಕೆಣಕಿದ್ದಾರೆ. ಕೊನೆಯದಾಗಿ, ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡಿರುವ ಮಧ್ಯವರ್ತಿಗಳ ಹಾಗೂ ಆರೋಪಿಗಳ ಫೋಟೋಗಳ ಬಗ್ಗೆ ವಿಪಕ್ಷ ನಾಯಕರು ಯಾವಾಗ ಮಾತನಾಡುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಪ್ರಚಲಿತ ಹಗರಣಗಳಿಂದ ಗಮನ ಬ his ಸಲು ಬಿಜೆಪಿ ಯತ್ನಿಸುತ್ತಿದ್ದು, ತಾವು ಕೇಳಿರುವ ನೇರ ಪ್ರಶ್ನೆಗಳಿಗೆ ಆರ್. ಅಶೋಕ್ ಅವರು ಮೊದಲು ಉತ್ತರ ನೀಡಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲು ಎಸೆದಿದ್ದಾರೆ.

