Dailyhunt Logo
  • Light mode
    Follow system
    Dark mode
    • Play Story
    • App Story
RAHUL GANDHI: ವಿದ್ಯಾರ್ಥಿಗಳ ಮನೆಗೆ ಗೂಂಡಾಗಳನ್ನು ಕಳುಹಿಸಿ ಬಲವಂತದ ಕ್ಷಮೆ: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

RAHUL GANDHI: ವಿದ್ಯಾರ್ಥಿಗಳ ಮನೆಗೆ ಗೂಂಡಾಗಳನ್ನು ಕಳುಹಿಸಿ ಬಲವಂತದ ಕ್ಷಮೆ: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

Navasamaja.com 1 week ago

ವದೆಹಲಿ: ಶಿಕ್ಷಣ ವ್ಯವಸ್ಥೆಯಲ್ಲಿನ (Education) ಅಕ್ರಮಗಳನ್ನು ಖಂಡಿಸಿ ಪ್ರತಿಭಟನೆ (Student Protest) ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ (Police) ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, (Rahul Gandhi) ಪ್ರತಿಭಟನಾಕಾರರ ದಮನಕ್ಕೆ ಸರ್ಕಾರ ಬೆದರಿಕೆ ಹಾಗೂ ಬಲಪ್ರಯೋಗದ ಹಾದಿ ಹಿಡಿದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವಿವಿಧ ರಾಜ್ಯಗಳಿಂದ ಬಂದಿದ್ದ ಯುವ ಪ್ರತಿಭಟನಾಕಾರರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಕ್ಕುಗಳಿಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳನ್ನು ಬೆದರಿಸಲು ಅವರ ಮನೆಗಳಿಗೆ ಗೂಂಡಾಗಳನ್ನು ಕಳುಹಿಸಲಾಗಿದೆ ಹಾಗೂ 15 ವರ್ಷದ ಬಾಲಕಿಯೊಬ್ಬಳಿಂದ ಬಲವಂತವಾಗಿ ಕ್ಷಮಾಪಣೆ ಬರೆಸಿಕೊಳ್ಳಲಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಪ್ರಜಾಪ್ರಭುತ್ವಕ್ಕೆ ಮಾರಕ

ಸುದ್ದಿಗೋಷ್ಠಿಗೂ ಮುನ್ನ ಯುವ ಪ್ರತಿಭಟನಾಕಾರರೊಂದಿಗೆ ಮುಕ್ತವಾಗಿ ಸಮಾಲೋಚನೆ ನಡೆಸಿದ ರಾಹುಲ್ ಗಾಂಧಿ, ವಿದ್ಯಾರ್ಥಿಗಳು ತಮ್ಮ ಮೇಲಾದ ಹಲ್ಲೆ, ಬೆದರಿಕೆ ಹಾಗೂ ಅನುಭವಿಸಿದ ಕಿರುಕುಳದ ಬಗ್ಗೆ ಕಣ್ಣೀರು ಹಾಕಿದ್ದನ್ನು ಹಂಚಿಕೊಂಡರು. ದೇಶದ ಭವಿಷ್ಯಕ್ಕಾಗಿ ಧೈರ್ಯವಾಗಿ ನಿಂತಿರುವ ಈ ಯುವಜನತೆಯನ್ನು ಕಂಡು ತನಗೆ ಹೆಮ್ಮೆಯಾಗುತ್ತಿದೆ ಎಂದ ಅವರು, ಈ ವಿದ್ಯಾರ್ಥಿಗಳು ಸಂವಿಧಾನ ಹಾಗೂ ದೇಶದ ಆಶಯಗಳನ್ನು ರಕ್ಷಿಸುತ್ತಿದ್ದಾರೆ ಎಂದು ಅವರು ಬಣ್ಣಿಸಿದರು. ಸಂಪೂರ್ಣವಾಗಿ ಕುಸಿದುಬಿದ್ದಿರುವ ಮತ್ತು ನಿರುಪಯುಕ್ತವಾಗಿರುವ ಶಿಕ್ಷಣ ವ್ಯವಸ್ಥೆಯನ್ನು ಪ್ರಶ್ನಿಸುವುದು ಅಥವಾ ದೂರು ನೀಡುವುದು ಅಪರಾಧವಲ್ಲ. ವಿದ್ಯಾರ್ಥಿಗಳು ಯಾವುದೇ ಹಿಂಸಾಚಾರಕ್ಕೆ ಇಳಿಯದೆ ಶಾಂತಿಯುತವಾಗಿ ಹಕ್ಕುಗಳನ್ನು ಕೇಳುತ್ತಿದ್ದರು. ಆದರೂ ಅವರ ಮೇಲೆ ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನೀವು ಯಾವುದೇ ತಪ್ಪು ಮಾಡಿಲ್ಲ: ವಿದ್ಯಾರ್ಥಿಗಳಿಗೆ ರಾಹುಲ್‌ ಭರವಸೆ
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ ರಾಹುಲ್ ಗಾಂಧಿ, "ನೀವು ಯಾವುದೇ ತಪ್ಪು ಮಾಡಿಲ್ಲ, ಹಾಗಾಗಿ ಸರ್ಕಾರಕ್ಕಾಗಲಿ ಅಥವಾ ಪೊಲೀಸರಿಗಾಗಲಿ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದರು. ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳಿಗೆ ಮುಕ್ತಿ ಸಿಗಬೇಕು ಮತ್ತು ಯುವಜನತೆಯ ಭವಿಷ್ಯಕ್ಕೆ ಗೌರವ ನೀಡುವಂತಹ ಪಾರದರ್ಶಕ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ನಾಯಕರು, ವಿದ್ಯಾರ್ಥಿಗಳ ಪರವಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಭರವಸೆ ನೀಡಿದರು.

Dailyhunt
Disclaimer: This content has not been generated, created or edited by Dailyhunt. Publisher: Navasamaja