Dailyhunt Logo
  • Light mode
    Follow system
    Dark mode
    • Play Story
    • App Story
RAIN ALERT: ಮುಂದಿನ ಒಂದು ವಾರ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ

RAIN ALERT: ಮುಂದಿನ ಒಂದು ವಾರ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ

Navasamaja.com 1 week ago

ಬೆಂಗಳೂರು: ಕರ್ನಾಟಕದಾದ್ಯಂತ (Karnataka) ಮುಂದಿನ 7 ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಮೇ 31ರ ವರೆಗೆ ಗುಡುಗು-ಸಿಡಿಲು ಸಹಿತ ಗಾಳಿ, ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನ ಹವಾಮಾನದ ತೀವ್ರತೆಯನ್ನು ಪರಿಗಣಿಸಿ ರಾಜ್ಯದ ಪ್ರಮುಖ ವಲಯಗಳಿಗೆ 'ಆರೆಂಜ್ ಅಲರ್ಟ್' (Orange Alert) ನೀಡಲಾಗಿದ್ದು, ಜೂನ್ 3ರ ವರೆಗಿನ ಹವಾಮಾನ ಮುನ್ಸೂಚನೆಯ ಸಂಪೂರ್ಣ ವಿವರ ಇಲ್ಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' (Orange Alert) ಘೋಷಿಸಲಾಗಿದ್ದು, ಭಾರಿ ಗುಡುಗು, ಮಿಂಚು ಸಹಿತಮಳೆಯಾಗಲಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹವಾಮಾನ ತೀವ್ರಗೊಳ್ಳಲಿದ್ದು, ಆರಂಭದ ಎರಡು ದಿನಗಳ ಕಾಲ 'ಆರೆಂಜ್ ಅಲರ್ಟ್' ಜಾರಿಯಲ್ಲಿರಲಿದೆ. ತೀವ್ರ ಸಿಡಿಲು ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ಇದೆ.

ಕರಾವಳಿಯ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ನಿರಂತರವಾಗಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದಲ್ಲಿ ವರುಣನ ಅಬ್ಬರ - ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ನೈಋತ್ಯ ಮುಂಗಾರು ಮಾರುತಗಳ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಈ ದೊಡ್ಡ ಬದಲಾವಣೆಯಾಗುತ್ತಿದ್ದು, ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕಲಬುರ್ಗಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಬಲವಾದ ಗಾಳಿಯೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಜಾಗರೂಕರಾಗಿರಲು ಸೂಚಿಸಲಾಗಿದೆ.ಬೆಂಗಳೂರು ನಗರ ಹವಾಮಾನ: ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆ ಮತ್ತು ರಾತ್ರಿಯ ವೇಳೆಯಲ್ಲಿ ಗುಡುಗು-ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಮೇ 28ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಬಂಗಾಳಕೊಲ್ಲಿಯಲ್ಲಿ ಜೂನ್ 3ರಿಂದ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜೂನ್ 4 ರಂದು ಮುಂಗಾರು ಕೇರಳಕ್ಕೆ ಹಾಗೂ 5ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.

ರೈತರಿಗೆ ಸೂಚನೆ

ಕಟಾವು ಮಾಡಿದ ಬೆಳೆಗಳನ್ನು ಬಯಲಿನಲ್ಲಿ ಇಡದೆ, ತಕ್ಷಣವೇ ಸುರಕ್ಷಿತ ಹಾಗೂ ಮುಚ್ಚಿದ ಜಾಗಗಳಿಗೆ ಸ್ಥಳಾಂತರಿಸಿ. ತೋಟಗಳಲ್ಲಿ ಮತ್ತು ಜಾನುವಾರುಗಳನ್ನು ಮೇಯಿಸಲು ಹೊರಗೆ ಕರೆದೊಯ್ಯುವಾಗ ಸಿಡಿಲಿನ ಬಗ್ಗೆ ಎಚ್ಚರವಿರಲಿ

ಇನ್ನು ಸತತವಾಗಿ 7 ದಿನಗಳ ಕಾಲ ರಾಜ್ಯದಾದ್ಯಂತ ಮಳೆ ಮುಂದುವರಿಯುವುದರಿಂದ, ತಗ್ಗು ಪ್ರದೇಶಗಳಲ್ಲಿ ನೀರು ತುಂಬುವ ಸಾಧ್ಯತೆಯಿದೆ. ಹೊರಗಡೆ ಕೆಲಸದ ಮೇಲೆ ಹೋಗುವವರು ಅಥವಾ ಪ್ರವಾಸದ ಪ್ಲಾನ್ ಮಾಡಿರುವವರು ಹವಾಮಾನದ ವರದಿಯನ್ನು ಗಮನದಲ್ಲಿಟ್ಟುಕೊಂಡು ಹೊರಡುವುದು ಒಳ್ಳೆಯದು.

Dailyhunt
Disclaimer: This content has not been generated, created or edited by Dailyhunt. Publisher: Navasamaja