Dailyhunt Logo
  • Light mode
    Follow system
    Dark mode
    • Play Story
    • App Story
RAIN ALERT : ರಾಜ್ಯದಲ್ಲಿ ಮಳೆಯ ಭರವಸೆ : ಜುಲೈ 5 ರಿಂದ 8 ರವರೆಗೆ ಭಾರೀ ವರ್ಷಧಾರೆ ಸಾಧ್ಯತೆ

RAIN ALERT : ರಾಜ್ಯದಲ್ಲಿ ಮಳೆಯ ಭರವಸೆ : ಜುಲೈ 5 ರಿಂದ 8 ರವರೆಗೆ ಭಾರೀ ವರ್ಷಧಾರೆ ಸಾಧ್ಯತೆ

Navasamaja.com 1 week ago

ಬೆಂಗಳೂರು : ರಾಜ್ಯದಲ್ಲಿ (karnataka ) ಕೆಲ ದಿನಗಳಿಂದ ಮರೀಚಿಕೆಯಾಗಿದ್ದ ಮುಂಗಾರು ಮಳೆ (Rain ) ಈಗ ಅಬ್ಬರ ಶುರುಮಾಡುವ ಭರವಸೆ ಮೂಡಿಸಿದೆ.

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಜುಲೈ 5 ರಿಂದ ಜುಲೈ 8 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಈ ಹಿನ್ನೆಲೆಯಲ್ಲಿ ಕರಾವಳಿಯ ಈ ಮೂರು ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಕಡ್ಡಾಯವಾಗಿ ಆರೆಂಜ್ ಅಲರ್ಟ್ ಘೋಷಿಸಿದೆ.

ಹಾಗೆಯೇ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೂ ಮುಂದಿನ ಎರಡು ದಿನಗಳ ಕಾಲ ಹಳದಿ (ಯೆಲ್ಲೋ) ಅಲರ್ಟ್ ನೀಡಲಾಗಿದ್ದು, ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ರಾಜ್ಯದ ಘಟ್ಟ ಪ್ರದೇಶಗಳಲ್ಲಿ ಜುಲೈ 5 ರಿಂದ 9 ರವರೆಗೆ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸುರಕ್ಷಿತವಾಗಿರಲು ಕೋರಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja