ಕೋಲಾರ: ಕಾಳಹಸ್ತಿ ದೇವಾಲಯದ ದರ್ಶನ ಮುಗಿಸಿ ಬೆಂಗಳೂರಿನತ್ತ (Bengaluru) ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ (Road Mishap) ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಸಮೀಪದ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಅಪಘಾತದಲ್ಲಿ ಬೆಂಗಳೂರಿನ ರಾಮಪುರದ ಮೇಘನಾ ಹಾಗೂ ಕಾರು ಚಾಲಕ ಜಯಂತ್ ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಷಣ್ಮುಗ, ಪೂಜಾ, ರಾಜೇಶ್, ಬಾಬು ಹಾಗೂ ವಿಜಯಲಕ್ಷ್ಮಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಳಹಸ್ತಿಯಿಂದ ಬೆಂಗಳೂರಿಗೆ ವಾಪಸಾಗುವಾಗ ದುರಂತ ಬೆಂಗಳೂರಿನಿಂದ ಕಾಳಹಸ್ತಿ ದೇವಾಲಯಕ್ಕೆ ತೆರಳಿದ್ದವರು ದೇವರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ವಾಪಸಾಗುತ್ತಿದ್ದರು. ಈ ವೇಳೆ ಕುಪ್ಪನಹಳ್ಳಿ ಸಮೀಪ ಎಕ್ಸ್ಪ್ರೆಸ್ವೇನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಗಾಯಗೊಂಡ ಐವರಿಗೂ ಚಿಕಿತ್ಸೆ ಮುಂದುವರಿದಿದೆ. ಅಪಘಾತದ ಮಾಹಿತಿ ತಿಳಿದು ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ನಡೆದ ಸ್ಥಳ ಹಾಗೂ ಕಾರನ್ನು ಪರಿಶೀಲಿಸಿದ ಪೊಲೀಸರು ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ಕಲೆಹಾಕಿದ್ದಾರೆ. ಕಾರು ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ಘಟನೆಗೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಸಂಪೂರ್ಣ ಕಾರಣ ಹಾಗೂ ಇತರೆ ವಿವರಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

