Dailyhunt
ROAD MISHAP: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ, ಬಾಲಕಿ ಸಾ*ವು!

ROAD MISHAP: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ, ಬಾಲಕಿ ಸಾ*ವು!

Navasamaja.com 2 weeks ago

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಭೀಕರ ಅಪಘಾತದಲ್ಲಿ (Accident) ಬಾಲಕಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಇಂದು ನಡೆದಿದೆ.

ಮೃತಳನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಬಾಲಕಿಯು ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿಯ ಪುತ್ರಿ ಎಂದು ತಿಳಿದುಬಂದಿದೆ. ಈ ಕುಟುಂಬವು ಪ್ರಸ್ತುತ ಹೊಸಕೋಟೆಯಲ್ಲಿ ವಾಸವಾಗಿದೆ.

ಜಾತ್ರೆಗೆ ತೆರಳಿದ್ದ ಈ ಕುಟುಂಬವು ತಮ್ಮ ಸಂಬಂಧಿಕರಾದ ಮಹೇಶ್ ಎಂಬುವವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಲಾರಿಯನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹತ್ತಿ ಪಲ್ಟಿಯಾಗಿದೆ.

ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂಓದಿ: ಶಾಸಕ ಶಿವಲಿಂಗೇಗೌಡರ ಬಂಟನ ಅಟ್ಟಹಾಸ - ದಂಪತಿ ಮೇಲೆ ಮಾರಣಾಂತಿಕ ಹಲ್ಲೆ!

Dailyhunt
Disclaimer: This content has not been generated, created or edited by Dailyhunt. Publisher: Navasamaja