Dailyhunt Logo
  • Light mode
    Follow system
    Dark mode
    • Play Story
    • App Story
SHOCKING : ಏನ್ರೀ ಈ ಮಕ್ಕಳು!? - ರೀಲ್ಸ್ ಮಾಡಬೇಡ ಎಂದಿದ್ದಕ್ಕೆ ನಾಲೆಗೆ ಹಾರಿ ಪ್ರಾಣ ಬಿಟ್ಟಳು!

SHOCKING : ಏನ್ರೀ ಈ ಮಕ್ಕಳು!? - ರೀಲ್ಸ್ ಮಾಡಬೇಡ ಎಂದಿದ್ದಕ್ಕೆ ನಾಲೆಗೆ ಹಾರಿ ಪ್ರಾಣ ಬಿಟ್ಟಳು!

Navasamaja.com 3 months ago

ಉತ್ತರ ಪ್ರದೇಶ: ಇಲ್ಲಿನ ಚಂದೌಲಿ ಜಿಲ್ಲೆಯಲ್ಲಿ ತಾಯಿ ಬೈದರು ಎನ್ನುವ ಕಾರಣಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು (Tragedy) ಕಾಲುವೆಗೆ (Shocking) ಜಿಗಿದು ಆತ್ಮಹತ್ಯೆ (Crime) ಮಾಡಿಕೊಂಡಿರುವ ನೋವಿನ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದೇ ಈ ದುರಂತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದೌಲಿ ಜಿಲ್ಲೆಯ ಗೋಧನಾ ಗ್ರಾಮದ ಸಮೀಪವಿರುವ ಕಾಲುವೆಯೊಂದರಲ್ಲಿ ಬುಧವಾರ ಮುಂಜಾನೆ ಬಾಲಕಿಯ ಶವ ಪತ್ತೆಯಾದಾಗ ಈ ಘಟನೆ ಬೆಳಕಿಗೆ ಬಂದಿದೆ. ಸೇತುವೆಯ ಬಳಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಏನಿದು ಪ್ರಕರಣ?
ಪೊಲೀಸ್ ತನಿಖೆಯ ಪ್ರಕಾರ, ಮೃತ ಬಾಲಕಿ ಲೇವಾ ಮೋಡ್ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗಷ್ಟೇ ನೆರೆಹೊರೆಯ ಮಿರ್ಜಾಪುರ ಜಿಲ್ಲೆಯಲ್ಲಿದ್ದ ತನ್ನ ಅಜ್ಜ-ಅಜ್ಜಿಯ ಮನೆಗೆ ಹೋಗಿದ್ದಳು. ಅಲ್ಲಿ ಅವಳು ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುತ್ತಿದ್ದಾಗ, ಅವಳ ತಾಯಿ ಅದನ್ನು ಗಮನಿಸಿ ತರಾಟೆಗೆ ತೆಗೆದುಕೊಂಡಿದ್ದರು. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಕಡಿಮೆ ಮಾಡುವಂತೆ ಹಾಗೂ ವಿಡಿಯೋ ಮಾಡುವುದನ್ನು ನಿಲ್ಲಿಸುವಂತೆ ಬುದ್ಧಿ ಹೇಳಿದ್ದರು. ತಾಯಿ ಬೈದಿದ್ದರಿಂದ ತೀವ್ರವಾಗಿ ಬೇಸರಗೊಂಡ ಬಾಲಕಿ, ಅಜ್ಜಿಯ ಹಳ್ಳಿಯಲ್ಲಿದ್ದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ತನಿಖೆ ಮುಂದುವರೆಸಿದ ಪೊಲೀಸರು
ಕಾಲುವೆ ನೀರಿನ ಸೆಳತಕ್ಕೆ ಕೊಚ್ಚಿಹೋದ ಬಾಲಕಿಯ ಶವ, ಕೊನೆಗೆ ಚಂದೌಲಿಯ ಅಲಿನಗರ ವ್ಯಾಪ್ತಿಯ ಗೋಧನಾ ಗ್ರಾಮದ ಬಳಿ ಸಿಕ್ಕಿದೆ. ತನಿಖೆಯ ಸಮಯದಲ್ಲಿ ಬಾಲಕಿಯ ಗುರುತು ಪತ್ತೆಹಚ್ಚಿದ ಪೊಲೀಸರು ಆಕೆಯ ಕುಟುಂಬದವರಿಗೆ ವಿಷಯ ಮುಟ್ಟಿಸಿದ್ದಾರೆ. ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿ ಅರುಣ್ ಕುಮಾರ್ ಸಿಂಗ್, ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ನಮ್ಮ ತಂಡ ಸ್ಥಳಕ್ಕೆ ಹೋಗಿ ಶವವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಘಟನೆಯ ಸಂಪೂರ್ಣ ಹಿನ್ನೆಲೆಯನ್ನು ತಿಳಿಯಲು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja