Dailyhunt Logo
  • Light mode
    Follow system
    Dark mode
    • Play Story
    • App Story
SUBBAREDDY: ಬಿಜೆಪಿಗೆ ಹೋಗಿದ್ದರೆ ಮಂತ್ರಿಯಾಗುತ್ತಿದ್ದೆ! ಕಾಂಗ್ರೆಸ್ ವಿರುದ್ಧ ಶಾಸಕ ಸುಬ್ಬಾರೆಡ್ಡಿ ಅಸಮಾಧಾನ

SUBBAREDDY: ಬಿಜೆಪಿಗೆ ಹೋಗಿದ್ದರೆ ಮಂತ್ರಿಯಾಗುತ್ತಿದ್ದೆ! ಕಾಂಗ್ರೆಸ್ ವಿರುದ್ಧ ಶಾಸಕ ಸುಬ್ಬಾರೆಡ್ಡಿ ಅಸಮಾಧಾನ

Navasamaja.com 2 weeks ago

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ (Cabinet Expansion) ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಕಿಡಿ ಹೊತ್ತಿದೆ. ಇದೀಗ ಚಿಕ್ಕಬಳ್ಳಾಪುರ ಶಾಸಕ ಸುಬ್ಬಾ ರೆಡ್ಡಿ (Subbareddy) ತಮ್ಮ ಬೇಸರ ಹೊರಹಾಕಿದ್ದಾರೆ.

ಸುಬ್ಬಾ ರೆಡ್ಡಿ ಮಾತನಾಡಿ, ಆಪರೇಷನ್ ಕಮಲದ ವೇಳೆ ನಾನು ಹೋಗಿದ್ದರೆ ಮಂತ್ರಿ ಆಗ್ತಿದ್ದೆ.

ಯಾವತ್ತಾದರೂ ಪಕ್ಷಕ್ಕೆ ನಿಷ್ಠೆ ತೋರಿದರೆ ಒಳ್ಳೇದಾಗುತ್ತೆ ಎಂದು ನಂಬಿದ್ದೆ. ಆದರೆ ನಾನು ತೋರಿಸಿದ ನಿಷ್ಠೆಯನ್ನು ಪಕ್ಷ ನನಗೆ ತೋರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ಆಪರೇಷನ್ ಕಮಲ ಮಾಡಿದಾಗ ನನ್ನ ಸ್ನೇಹಿತ ಡಾಕ್ಟರ್ ಸುಧಾಕರ್ ಅವರು ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದರು. ಆಗ ಇಬ್ಬರೂ ಜೊತೆಯಾಗಿ ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ಉಸ್ತುವಾರಿ ಆಗ್ತೀವಿ ಎಂದಿದ್ದರು. ಆದರೆ ನಾನು ಹೋಗಲಿಲ್ಲ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja