Dailyhunt Logo
  • Light mode
    Follow system
    Dark mode
    • Play Story
    • App Story
SUPREME COURT : ಚುನಾವಣಾ ಆಯುಕ್ತರ ನೇಮಕ ವಿವಾದ, ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಸಮರ್ಥನೆ

SUPREME COURT : ಚುನಾವಣಾ ಆಯುಕ್ತರ ನೇಮಕ ವಿವಾದ, ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಸಮರ್ಥನೆ

Navasamaja.com 3 months ago

ನವದೆಹಲಿ : ಮುಖ್ಯ ಚುನಾವಣಾ ಆಯುಕ್ತರು (Chief election commissioner) ಹಾಗೂ ಇತರ ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ 2023ರ ಕಾಯ್ದೆಯನ್ನು ಕೇಂದ್ರ ಸರ್ಕಾರ (Union government) ಸುಪ್ರೀಂ ಕೋರ್ಟ್‌ನಲ್ಲಿ (Supreme court) ಸಮರ್ಥಿಸಿಕೊಂಡಿದೆ.

ಪ್ರಧಾನಮಂತ್ರಿ, ಅವರಿಂದ ನಾಮನಿರ್ದೇಶಿತ ಕೇಂದ್ರ ಸಚಿವರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಬಗ್ಗೆ ಅನುಮಾನ ವ್ಯಕ್ತಪಡಿಸಲು ಯಾವುದೇ ಆಧಾರವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದಾರೆ.

ದೇಶದ ಪ್ರಧಾನಮಂತ್ರಿಯ ಸಾಂವಿಧಾನಿಕ ಹುದ್ದೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವುದು ಸಮಂಜಸವಲ್ಲ. ಕಾರ್ಯಾಂಗ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತದೆ ಎಂಬ ಪೂರ್ವಾನುಮಾನವನ್ನು ನ್ಯಾಯಾಲಯ ಒಪ್ಪಲು ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ. ಜೊತೆಗೆ, ಮುಖ್ಯ ನ್ಯಾಯಮೂರ್ತಿಯ ಉಪಸ್ಥಿತಿ ಆಯ್ಕೆ ಸಮಿತಿಯಲ್ಲಿ ಕಡ್ಡಾಯ ಸಾಂವಿಧಾನಿಕ ನಿಯಮವಲ್ಲ; 2023ರ ಸುಪ್ರೀಂ ಕೋರ್ಟ್ ತೀರ್ಪು ಮಧ್ಯಂತರ ವ್ಯವಸ್ಥೆಯಾಗಿತ್ತು ಎಂದೂ ಹೇಳಿದರು.

ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಈ ವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ಇದೇ ವೇಳೆ, ಮುಖ್ಯ ನ್ಯಾಯಮೂರ್ತಿಯನ್ನು ಆಯ್ಕೆ ಸಮಿತಿಯಿಂದ ಕೈಬಿಟ್ಟಿರುವುದು ನೇಮಕಾತಿ ಪ್ರಕ್ರಿಯೆಯ ಸ್ವಾಯತ್ತತೆಗೆ ಧಕ್ಕೆಯಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರು ಆಕ್ಷೇಪಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja