Dailyhunt Logo
  • Light mode
    Follow system
    Dark mode
    • Play Story
    • App Story
TEJASWI SURYA : ಮೋದಿ ಕೈಗೊಂಡ ಕ್ರಮಗಳು ವಿದ್ಯಾರ್ಥಿಗಳಿಗೆ ವರದಾನ - ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಅಬ್ಬರ : VIDEO

TEJASWI SURYA : ಮೋದಿ ಕೈಗೊಂಡ ಕ್ರಮಗಳು ವಿದ್ಯಾರ್ಥಿಗಳಿಗೆ ವರದಾನ - ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಅಬ್ಬರ : VIDEO

Navasamaja.com 5 days ago

ವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ (Question paper leak) ತಡೆಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅನುಮೋದನೆ ದೊರೆತಿರುವ ಬೆನ್ನಲ್ಲೇ, ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejaswi surya) ಮಾಡಿದ ಭಾಷಣ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ (Social media) ಗಮನ ಸೆಳೆಯುತ್ತಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಶಾಶ್ವತ ಸುಧಾರಣೆ ತರಲು ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಸರ್ಕಾರ ಬದ್ಧವಾಗಿದೆ, ಈಗಾಗಲೇ ಕೈಗೊಂಡಿರುವ ಕ್ರಮಗಳು ವಿದ್ಯಾರ್ಥಿಗಳ ಪರವಾಗಿದೆ ಎಂದು ಹೇಳಿದ್ದಾರೆ.

ಹೌದು, ಪ್ರಶ್ನೆಪತ್ರಿಕೆ ಸೋರಿಕೆಯಿಂದ ಸಾಮಾನ್ಯ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಹೊಡೆತ ಬೀಳುತ್ತದೆ. ಪ್ರತಿಭೆ ಮತ್ತು ಶ್ರಮಕ್ಕೆ ನ್ಯಾಯ ಒದಗಿಸುವ ಪರೀಕ್ಷಾ ವ್ಯವಸ್ಥೆಯನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದು ಸೂರ್ಯ ಅಭಿಪ್ರಾಯಪಟ್ಟರು. ಚರ್ಚೆಗೆ ಒತ್ತಾಯಿಸಿದ್ದ ವಿರೋಧ ಪಕ್ಷಗಳೇ ಮಸೂದೆ ಮಂಡನೆಯಾದ ಬಳಿಕ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿದರು.

ಇನ್ನು ತಮ್ಮ ಭಾಷಣದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕನ್ನಡದಲ್ಲೇ ಪ್ರಶ್ನಿಸಿದ ಅವರು, ಕೆಪಿಎಸ್‌ಸಿ ವಿವಾದ, ವೆಟರ್ನರಿ ಕಾಲೇಜು ಪ್ರವೇಶ ಹಗರಣ ಸೇರಿದಂತೆ ರಾಜ್ಯದ ಹಲವು ಪ್ರಕರಣಗಳ ಬಗ್ಗೆ ಉತ್ತರ ನೀಡುವಂತೆ ಆಗ್ರಹಿಸಿದರು. ಜೊತೆಗೆ ಸಿಬಿಐ ತನಿಖೆ, ಎನ್‌ಟಿಎ ಬಲವರ್ಧನೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಕಠಿಣ ಕಾನೂನು ಜಾರಿಯಂತಹ ಕ್ರಮಗಳನ್ನು ಮೋದಿ ಸರ್ಕಾರ ಈಗಾಗಲೇ ಕೈಗೊಂಡಿದೆ ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Navasamaja