Dailyhunt Logo
  • Light mode
    Follow system
    Dark mode
    • Play Story
    • App Story
VACHANANANDA SRI : ಪೋಕ್ಸೊ ಪ್ರಕರಣ: ವಚನಾನಂದ ಸ್ವಾಮೀಜಿ ಗೆ ಕೊಂಚ ರಿಲೀಫ್

VACHANANANDA SRI : ಪೋಕ್ಸೊ ಪ್ರಕರಣ: ವಚನಾನಂದ ಸ್ವಾಮೀಜಿ ಗೆ ಕೊಂಚ ರಿಲೀಫ್

Navasamaja.com 4 months ago

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಿಂದ (Panchamasali Gurupeeth) ಪದಚ್ಯುತರಾಗಿರುವ ವಚನಾನಂದ ಸ್ವಾಮೀಜಿ (Vachanananda sri) ಅವರಿಗೆ ಪೋಕ್ಸೊ ಪ್ರಕರಣದಲ್ಲಿ (POCSO) ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಲಾಗಿದೆ.

ಇಲ್ಲಿನ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯವು ಈ ಆದೇಶ ನೀಡಿದೆ.

ಏನಿದು ಪ್ರಕರಣ?

ಹರಿಹರ ಗ್ರಾಮೀಣ ಠಾಣೆ ವ್ಯಾಪ್ತಿಯ ಗುರುಪೀಠದ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ವಚನಾನಂದ ಸ್ವಾಮೀಜಿಯವರು ಬಲವಂತವಾಗಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಠದ ಟ್ರಸ್ಟಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ತಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ಸ್ವಾಮೀಜಿಯವರು ಈ ಹಿಂದೆ ಒಂದನೇ ವಿಶೇಷ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ನ್ಯಾಯಾಲಯದಲ್ಲಿ ನಡೆದಿದ್ದೇನು?

ಈ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕು ಎಂದು ಹರಿಹರ ಗ್ರಾಮೀಣ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಆರಂಭಿಸುತ್ತಿದ್ದಂತೆ, ಸ್ವಾಮೀಜಿ ಪರ ವಕೀಲರು ಆಕ್ಷೇಪಣೆ ಎತ್ತಿ ತಕರಾರು ಅರ್ಜಿ ಸಲ್ಲಿಸಿದರು. ವಕೀಲರ ತಕರಾರನ್ನು ಪರಿಗಣಿಸಿದ ನ್ಯಾಯಾಧೀಶರು, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja