Wednesday, 12 Aug, 10.46 am Navayuga News

ಜಿಲ್ಲಾ ಸುದ್ದಿಗಳು
ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ

ಬಾಗಲಕೋಟೆ, ಆಗಸ್ಟ 12 :- ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ವಾರ್ಡ ನಂ.7 ಮತ್ತು 8ರಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ ನೀಡಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಸಂಘ ಸಂಸ್ಥೆಗಳು ಕನಿಷ್ಠ 3 ವರ್ಷದಿಂದ ಚಾಲನೆಯಲ್ಲಿದ್ದು, ಹಿಂದಿನ 2 ವರ್ಷಗಳಲ್ಲಿ ಕನಿಷ್ಠ 2 ಲಕ್ಷ ರೂ.ಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು. ಸರಕಾರದ ಆದೇಶದನ್ವಯ ನೇರ ನೇಮಕಾತಿಗೆ ಅರ್ಹತೆ ಹೊಂದಿರುವವರು ನ್ಯಾಯಬೆಲೆ ಅಂಗಡಿ ಕೋರಿ ಅರ್ಜಿ ಸಲ್ಲಿಸಿದಲ್ಲಿ ಈ ಪ್ರಕಟಣೆ ರದ್ದಾಗುವುದು.

ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಯನ್ನು ತಹಶೀಲ್ದಾರ ರಬಕವಿ-ಬನಹಟ್ಟಿ ಕಾರ್ಯಾಲದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ ಜೊತೆ ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ 8 ರೊಳಗಾಗಿ ಸಲ್ಲಿಸುವಂತೆ ಆಹಾರ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Navayuga News
Top