Dailyhunt Logo
  • Light mode
    Follow system
    Dark mode
    • Play Story
    • App Story
ಕಾಂಗ್ರೆಸ್ ಗೆ ಬಹುಮತವಿದೆ,ನಾವು ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ.: ಬಿ.ವೈ. ವಿಜಯೇಂದ್ರ ವಾಗ್ದಾಳಿ!

ಕಾಂಗ್ರೆಸ್ ಗೆ ಬಹುಮತವಿದೆ,ನಾವು ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ.: ಬಿ.ವೈ. ವಿಜಯೇಂದ್ರ ವಾಗ್ದಾಳಿ!

Navayuga News 1 week ago

ಹೊಸಪೇಟೆ: "ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಬಹುಮತವಿದೆ. ಇದರಲ್ಲಿ ನಾವು ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ನಮ್ಮ ಕೆಲಸವನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಸರ್ಕಾರದ ಆಂತರಿಕ ವಿಷಯಗಳಲ್ಲಿ ಬಿಜೆಪಿ ಮೂಗು ತೂರಿಸುವುದಿಲ್ಲ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.

ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಹೊಸಪೇಟೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಹಾಗೂ ಆಡಳಿತ ವೈಫಲ್ಯಗಳ ಕುರಿತು ತೀವ್ರ ವಾಗ್ದಾಳಿ ನಡೆಸಿದರು. ವಿಜಯೇಂದ್ರ ಅವರ ಹೇಳಿಕೆಯ ಪ್ರಮುಖ ಮುಖ್ಯಾಂಶಗಳು ಹೀಗಿವೆ:

ಮುಂದಿನ ಸಿಎಂ ಯಾರು ಎಂಬುದು ಯಕ್ಷಪ್ರಶ್ನೆ:

"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದು ಸದ್ಯದ ಯಕ್ಷಪ್ರಶ್ನೆಯಾಗಿದೆ. ಕಳೆದ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯವು ಸಂಪೂರ್ಣವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಈ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ" ಎಂದು ದೂರಿದರು.

ಆಡಳಿತ ಕುಸಿತ, ಓಲೈಕೆ ರಾಜಕಾರಣದ ಆರೋಪ:

"ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ಒಟ್ಟಾರೆ ಆಡಳಿತ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಸರ್ಕಾರ ಕೇವಲ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ಮುಳುಗಿದೆಯೇ ಹೊರತು ಬಡವರು, ರೈತರು ಹಾಗೂ ಯುವಕರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ನಾಯಕರ ನಡುವಿನ ಕುರ್ಚಿಯ ಕಚ್ಚಾಟವೇ ದೊಡ್ಡದಾಗಿದ್ದು, ಇದು ಇಡೀ ಆಡಳಿತ ಯಂತ್ರದ ಮೇಲೆ ದುಷ್ಪರಿಣಾಮ ಬೀರಿದೆ. ರಾಜ್ಯವು ಡ್ರಗ್ಸ್ ರಾಜಧಾನಿಯಾಗುವತ್ತ ಸಾಗುತ್ತಿರುವುದು ಆತಂಕಕಾರಿ" ಎಂದು ಆಕ್ಷೇಪಿಸಿದರು.

ಯಾರೇ ಸಿಎಂ ಆದರೂ ರಾಜ್ಯಕ್ಕೆ ಲಾಭ ಇಲ್ಲ:

"ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಡಿ.ಕೆ. ಶಿವಕುಮಾರ್, ಡಾ. ಜಿ. ಪರಮೇಶ್ವರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಯಾರಿಗೆ ಪಟ್ಟ ಸಿಗಬೇಕು ಎಂಬ ಆಂತರಿಕ ಗುದ್ದಾಟ ಜೋರಾಗಿದೆ. ಆದರೆ ಈ ಸರ್ಕಾರದಲ್ಲಿ ಯಾರೇ ಮುಖ್ಯಮಂತ್ರಿಯಾದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ಏಕೆಂದರೆ ಕರ್ನಾಟಕದ ಆರ್ಥಿಕ ಸ್ಥಿತಿ ಸುಧಾರಿಸಲಾಗದಷ್ಟು ದಿವಾಳಿಯಾಗಿದೆ" ಎಂದು ನುಡಿದರು.

ರೈತರ ಸಂಕಷ್ಟ ಆಲಿಸದ ಸಚಿವರು:

"ರಾಜ್ಯದಲ್ಲಿ ಕೃತಕ ರಸಗೊಬ್ಬರ ಅಭಾವ ಸೃಷ್ಟಿಸುವ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ರೈತರು ಸಂಕಷ್ಟದಲ್ಲಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಅವರ ಸಮಸ್ಯೆಗಳನ್ನು ಕೇಳುತ್ತಿಲ್ಲ. ಬದಲಿಗೆ ತಮಗೆ ಸಿಗಲಿರುವ ಅಧಿಕಾರ ಹಾಗೂ ಸಚಿವ ಸ್ಥಾನಗಳಿಗಾಗಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈ ಭ್ರಷ್ಟಾಚಾರ ಮತ್ತು ಅರಾಜಕತೆಯಿಂದ ಸಾಮಾನ್ಯ ಜನ ಬೇಸತ್ತಿದ್ದಾರೆ" ಎಂದು ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು

Dailyhunt
Disclaimer: This content has not been generated, created or edited by Dailyhunt. Publisher: Navayuga News