Wednesday, 25 Nov, 7.47 am Navayuga News

ರಾಜ್ಯ
ಕೆಎಸ್‌ಓಯು: 2020-21 (ಜುಲೈ ಆವೃತ್ತಿ) ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ದಿನಾಂಕದ ವಿಸ್ತರಣೆ, ನವೆಂಬರ್ 30 ಕೊನೆದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2020-21ನೇ(ಜುಲೈ ಆವೃತ್ತಿ) ಸಾಲಿಗೆ ಈ ಕೆಳಕಂಡ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ./ಬಿ.ಕಾಂ., ಬಿ.ಲಿಬ್.ಐ.ಎಸ್ಸಿ., ಎಂ.ಎ./ಎಂ.ಕಾಂ., ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ (ಎಂ.ಸಿ.ಜೆ)., ಎಂ.ಲಿಬ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ.ಡಿಪ್ಲೊಮಾ ಪ್ರೋಗ್ರಾಮ್ಸ್, ಡಿಪ್ಲೊಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್'ಗಳಿಗೆ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುವ ದೃಷ್ಟಿಯಿಂದ ದಂಡ ಶುಲ್ಕವಿಲ್ಲದೆ ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್‍ಗಳಿಗೆ ದಿನಾಂಕ: 30.11.2020 ರವರೆಗೆ ಪ್ರವೇಶಾತಿಯನ್ನು ವಿಸ್ತರಿಸಲಾಗಿದ್ದು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ ವಿವರಣಾ ಪುಸ್ತಕ, ವಿದ್ಯಾರ್ಹತೆ ಮತ್ತು ಪ್ರವೇಶಾತಿ ಶುಲ್ಕವನ್ನು ವೀಕ್ಷಿಸಬಹುದು ಹಾಗು ಆನ್‍ಲೈನ್ ಮೂಲಕ ಪ್ರವೇಶಾತಿ ಅರ್ಜಿಯನ್ನು ಭರ್ತಿಮಾಡಿ, ನಂತರ ಡೌನ್‍ಲೋಡ್ ಮಾಡಿಕೊಂಡು ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪಡೆದು, ಸ್ಥಳದಲ್ಲಿಯೇ ಅಧ್ಯಯನ ಸಾಮಗ್ರಿಗಳನ್ನು ನೀಡಲಾಗುವುದೆಂದು ಪ್ರಾದೇಶಿಕ ನಿರ್ದೇಶಕರಾದ ಗಿರೀಶ್ ಹೆಚ್.ಎನ್.ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿಶೇಷ ಸೂಚನೆ:-ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25ರಷ್ಟು ವಿನಾಯಿತಿ ನೀಡಲಾಗುವುದು ಹಾಗು ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದ್ದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:- ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ, ನಂ-61, 5ನೇ ಮುಖ್ಯರಸ್ತೆ, 5ನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಂಗಳೂರು-18. ಕಛೇರಿ ದೂರವಾಣಿ, ಸಂಖ್ಯೆ:-080-26603664 ಮೊಬೈಲ್ ಸಂಖ್ಯೆ: 9448668880 ಅನ್ನು ಸಂಪರ್ಕಿಸಬಹುದಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Navayuga News
Top