Dailyhunt Logo
  • Light mode
    Follow system
    Dark mode
    • Play Story
    • App Story
ಶಿವಸೇನೆ ಪುಂಡಾಟ : ಕನ್ನಡಪರ ಸಂಘಟನೆಗಳಿಂದ ಶನಿವಾರ ಬೆಳಗಾವಿ ಚಲೋ

ಶಿವಸೇನೆ ಪುಂಡಾಟ : ಕನ್ನಡಪರ ಸಂಘಟನೆಗಳಿಂದ ಶನಿವಾರ ಬೆಳಗಾವಿ ಚಲೋ

Navayuga News 5 years ago

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ವಿರುದ್ಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು, ಶನಿವಾರ ಬೆಳಗಾವಿ ಚಲೋ ನಡೆಸಲು ನಿರ್ಧರಿಸಿವೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರು ಗಡಿವಿವಾದ ಸಂಬಂಧ ನೀಡಿದ ಹೇಳಿಕೆಯ ವಿರುದ್ಧ ಪ್ರತಿಭಟಿಸಲು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು ನೇತೃತ್ವದ ತಂಡವು ಇದೇ ಶನಿವಾರ ದಿ.23 ರಂದು ಮುಂಜಾನೆ 11 ಗಂಟೆಗೆ ಬೆಳಗಾವಿಯ ಕಿತ್ತೂರು ಚೆನ್ನಮ್ಮ ವೃತ್ತಕ್ಕೆ ಆಗಮಿಸಲಿದೆಯೆಂದು ಸಾ.ರಾ.ಗೋವಿಂದು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಭಾಗವಹಿಸಬೇಕೆಂದು ಕರೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navayuga News