News First Live
329k Followers ಶಿವಸೇನೆ ರೆಬೆಲ್ ನಾಯಕ ಏಕನಾಥ್ ಶಿಂಧೆ ಬಣದ ಸಹಕಾರದೊಂದಿಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮನವಿ ಮಾಡಿದ್ದಾರೆ. ಈಗ ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದು, ಮಹಾರಾಷ್ಟ್ರ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಸಂಜೆ 7 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಬುಧವಾರ ರಾತ್ತಿ ಸುಪ್ರೀಂಕೋರ್ಟ್ ಆದೇಶದ ಬಳಿಕ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಈ ಬೆನ್ನಲ್ಲೇ ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲು ಮುಂದಾಗಿದ್ದಾರೆ. ಈಗ ಗೋವಾದಿಂದ ಮುಂಬೈಗೆ ಆಗಮಿಸಿರೋ ಶಿವಸೇನೆ ರೆಬೆಲ್ ನಾಯಕ ಏಕನಾಥ್ ಶಿಂಧೆ ಕೂಡ ಫಡ್ನವಿಸ್ ಜತೆಗೆ ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ.
ಈಗ ದೇವೇಂಡ್ರ ಫಡ್ನವಿಸ್ ಮತ್ತು ಏಕನಾಥ್ ಶಿಂಧೆ ಜತೆಗೆ ಹಲವರು ರಾಜ್ಯಪಾಲರ ಭೇಟಿಗೆ ತೆರಳಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: News First Live