Thursday, 03 Dec, 8.11 am News First Live

ದೇಶ
ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆ

ನವದೆಹಲಿ: ದೇಶದಲ್ಲಿ ಕಳೆದ 132 ದಿನಗಳಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 4.28 ಲಕ್ಷಕ್ಕೆ ಕುಸಿದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ದಿನನಿತ್ಯದ ಹತ್ತು ಲಕ್ಷ ಪರೀಕ್ಷೆಗಳಲ್ಲಿ, 50 ಸಾವಿರಕ್ಕಿಂತ ಕಡಿಮೆ ಸೋಂಕಿತ ಪ್ರಕರಣ ಪತ್ತೆಯಾಗುತ್ತಿವೆ. ಚೇತರಿಕೆಯ ಪ್ರಮಾಣ ಉತ್ತಮವಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದೆ ಎಂದಿದ್ದಾರೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 4.51 ರಷ್ಟಿದೆ. ಇದೊಂದು ಉತ್ತಮ ಬೆಳವಣಿಗೆ. ಆದ್ರೂ ದೇಶದ ಜನತೆ ಎಚ್ಚರದಿಂದಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: News First Live
Top