Wednesday, 21 Oct, 5.53 pm News First Live

ವಿಜಯಪುರ
ಹವಾಮಾನ ವೈಪರೀತ್ಯ ಹಿನ್ನೆಲೆ ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ ರದ್ದು

ವಿಜಯಪುರ: ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯ ಹಿನ್ನೆಲೆ ಇಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಇಂದು ಬಳ್ಳಾರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಪರೀಕ್ಷೆಗೆ ಮುಂದಾಗಿದ್ದರು.

ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆ ಸಿಎಂ ಯಡಿಯೂರಪ್ಪ ವಿಜಯಪುರ ಜಿಲ್ಲೆಯ ವೈಮಾನಿಕ ಸಮೀಕ್ಷೆ ರದ್ದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.

ಹವಾಮಾನ ವೈಪರಿತ್ಯ ಹಿನ್ನೆಲೆ ಸಿಎಂ ಯಡಿಯೂರಪ್ಪ ಆಲಮಟ್ಟಿಗೆ ಬರ್ತಿಲ್ಲ, ಆಲಮಟ್ಟಿಯಲ್ಲಿನ ಅಧಿಕಾರಿಗಳ ಜೊತೆಗಿನ ಸಭೆಯೂ ರದ್ದಾಗಿದೆ ಎಂದು ಆಲಮಟ್ಟಿಯಲ್ಲಿ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: News First Live
Top