Saturday, 08 Aug, 7.43 am News First Live

ತುಮಕೂರು
ಪ್ಲಾಸ್ಮಾ ದಾನ ಮಾಡಲು ಮುಂದಾದ ಕುಣಿಗಲ್ ಶಾಸಕ ಡಾ.ರಂಗನಾಥ್

ತುಮಕೂರು: ಕುಣಿಗಲ್ ಶಾಸಕ ಡಾ. ರಂಗನಾಥ್ ತಮ್ಮ ರಕ್ತದಲ್ಲಿನ ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೆ ಡಾ. ರಂಗನಾಥ್​ ಸೇರಿದಂತೆ ಮನೆಯ ಕೆಲ ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ವೃತ್ತಿಯಲ್ಲಿ ವೈದ್ಯರಾಗಿರುವ ರಂಗನಾಥ್​ 18 ದಿನಗಳ ಬಳಿಕ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಇದೀಗ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಹಾಗೂ ಕೊರೊನಾ ವೈರಸ್ ವಿರುದ್ಧ ಹೋರಾಡಲು ನೆರವಾಗುವಂತೆ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ. ಕೊರೊನಾದಿಂದ ಗುಣಮುಖರಾದ ಐಜಿಜಿ ಆಯಂಟಿಬಯೋಟಿಕ್ ಇರುವ 50 ವರ್ಷ ಒಳಗಿರುವ ಆರೋಗ್ಯವಂತರು ಪ್ಲಾಸ್ಮಾ ದಾನ ಮಾಡಬಹುದಾಗಿದೆ. ಇದರಿಂದ ಮತ್ತೊಬ್ಬರಲ್ಲಿ ಯಾರಿಗೆ ಈ ರಕ್ತದಲ್ಲಿನ ಪ್ಲಾಸ್ಮಾ ಅವಶ್ಯಕ ಇದೆ ಅಂತಹವರಿಗೆ ಸಹಾಯಕವಾಗಲಿದೆ. ಹೀಗಾಗಿ ಸೋಂಕಿನಿಂದ ಗುಣಮುಖರಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿರುವ ರಂಗನಾಥ್ ಇನ್ನು ಕೆಲವೇ ದಿನಗಳಲ್ಲಿ ಪ್ಲಾಸ್ಮಾ ದಾನ ಮಾಡಲು ನಿರ್ಧರಿಸಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: News First Live
Top