Saturday, 01 Aug, 11.04 pm News First Live

ಕೊಪ್ಪಳ
ಶಾಸಕ ಹಾಲಪ್ಪ ಆಚಾರ್​ಗೆ ಕೊರೊನಾ ಸೋಂಕು ದೃಢ

ಕೊಪ್ಪಳ: ಜಿಲ್ಲೆಯಲ್ಲಿ ಕೊರಾನಾ ಹಟ್ಟಹಾಸ ಮುಂದುವರೆದಿದೆ. ಸಾಮಾನ್ಯರಿಗಷ್ಟೇ ಅಲ್ಲದೇ ರಾಜಕೀಯ ನಾಯಕರಿಗೂ ಕೊರೊನಾ ದಾಳಿ ಮಾಡುತ್ತಿದೆ‌. ಇದೀಗ ಶಾಸಕ ಹಾಲಪ್ಪ ಆಚಾರ್ ಅವರಿಗೂ ಕೊರೊನಾ ಸೋಂಕು ತಗುಲಿದೆ.

ಶುಕ್ರವಾರ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಕೊರೊನಾ ದೃಢಪಟ್ಟಿತ್ತು. ಸಚಿವರು ಇತ್ತೀಚೆಗೆ ಕೊಪ್ಪಳಕ್ಕೆ ಭೇಟಿ ನೀಡಿದ್ರು ಆ ವೇಳೆ ಶಾಸಕ ಹಾಲಪ್ಪ ಆಚಾರ್ ಸಹ ಜೊತೆಗಿದ್ದರಂತೆ. ಹಾಗಾಗಿ ಸ್ವಯಂ ಕೋವಿಡ್ ತಪಾಸಣೆ ಮಾಡಿಸಿಕೊಂಡ ಹಾಲಪ್ಪ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ವೈದ್ಯಕೀಯ ವರದಿ ಪ್ರಕಾರ ನನಗೂ ಕೊರೊನಾ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವವರಲ್ಲಿ ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ವಿನಂತಿಸಿದ್ದಾರೆ.

ಸಾರ್ವಜನಿಕರ ಆರೋಗ್ಯ ಹಾಗೂ ಹಿತದೃಷ್ಟಿಯಿಂದ ಖುದ್ದು ಭೇಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ದೂರವಾಣಿ ಮೂಲಕ ತಾವು ಹಾಗೂ ತಮ್ಮ ಕಛೇರಿಯ ಸಿಬ್ಬಂದಿ ಜನರ ಸೇವೆಗೆ ಸದಾ ಕಾಲ ಲಭ್ಯ ಎಂದು ತಿಳಿಸಿದ್ದಾರೆ. ಎಲ್ಲರೂ ಮುಂಜಾಗ್ರತೆ ವಹಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ವಿರುದ್ಧದ ಸಮರದಲ್ಲಿ ಜಯವನ್ನು ಸಾಧಿಸೋಣ ಎಂದು ಶಾಸಕ ಹಾಲಪ್ಪ ಆಚಾರ್ ಸಂದೇಶ ನೀಡಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: News First Live
Top