Wednesday, 21 Oct, 1.10 pm News First Live

ರಾಜಕೀಯ
ಶತಾಯಗತಾಯ ಶಿರಾ-ಆರ್​.ಆರ್​ ನಗರ ಉಪಚುನಾವಣೆ ಗೆಲ್ಲಲು ಜೆಡಿಎಸ್ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಉಪ‌ಚುನಾವಣೆಯ ಕಣ ರಂಗೇರುತ್ತಿದೆ. ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳನ್ನ ಗೆಲ್ಲಲು ಜೆಡಿಎಸ್ ರಣತಂತ್ರ ರೂಪಿಸಿದೆ.

ಶಿರಾದಲ್ಲಿ ತಂದೆ, ಮಗ, ಮೊಮ್ಮಗನ ಜವಾಬ್ದಾರಿ
ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ ದೇವೇಗೌಡರೇ ಖುದ್ದು ಶಿರಾ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೂ ಶಿರಾದ ಜವಾಬ್ದಾರಿ ವಹಿಸಲಾಗಿದೆ. ಇತ್ತ ಆರ್.ಆರ್‌ ನಗರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಶಿರಾದಲ್ಲಿ ತಂದೆಯ ನೇತೃತ್ವದಲ್ಲಿ ಚುನಾವಣೆ ನಡೆದರೆ, ಆರ್.ಆರ್‌ ನಗರದಲ್ಲಿ ಮಗನ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಶತಾತಗತಾಯ ಎರಡು ಕ್ಷೇತ್ರದಲ್ಲಿ ಗೆಲ್ಲಲು ಜೆಡಿಎಸ್​ ತಂತ್ರ ಹೆಣೆದಿದೆ.

ಇದರ ಜೊತೆಗೆ ಎರಡೂ ಕ್ಷೇತ್ರದ ಗ್ರಾಮ ಪಂಚಾಯ್ತಿಗಳಿಗೆ ಹಾಗೂ ವಾರ್ಡ್​​ಗಳಿಗೂ ಉಸ್ತುವಾರಿ ನೇಮಕ ಮಾಡಲಾಗಿದೆ. ಶಿರಾದಲ್ಲಿ ಪ್ರತಿ ಗ್ರಾಮ ಪಂಚಾಯ್ತಿಗೆ ಹಾಸನ-ತುಮಕೂರಿನ ಶಾಸಕರು ಮತ್ತು ಮಾಜಿ ಶಾಸಕರಿಗೆ ಉಸ್ತುವಾರಿ ನೀಡಲಾಗಿದೆ. ಹಾಗೇ ಆರ್.ಆರ್ ನಗರದಲ್ಲಿ ಪ್ರತಿ ವಾರ್ಡ್​​ಗೂ ಪಕ್ಕದ ಜಿಲ್ಲೆಗಳ ಜನಪ್ರತಿನಿಧಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ರಾಮನಗರ ಶಾಸಕರು ಮತ್ತು ಮಾಜಿ ಶಾಸಕರು ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಉಸ್ತುವಾರಿ ಹೊತ್ತವರು ಅಭ್ಯರ್ಥಿ ಪರ ಪ್ರಚಾರ ಮಾಡಬೇಕು. ಕ್ಷೇತ್ರದಲ್ಲಿ ಅಭ್ಯರ್ಥಿ ಗೆಲುವಿಗೆ ಶ್ರಮ ವಹಿಸಬೇಕು. ಇದರ ಜೊತೆಗೆ ಎಎಂಲ್​ಸಿ ಕ್ಷೇತ್ರಗಳಿಗೂ ಇದೇ ರೀತಿಯ ತಂತ್ರಗಾರಿಕೆ ಅನುಸರಿಸಲಾಗ್ತಿದೆ. ಸ್ಥಳೀಯ ಶಾಸಕರು, ಮಾಜಿ ಶಾಸಕರು, ಪರಿಷತ್ ಸದಸ್ಯರು ಅಭ್ಯರ್ಥಿಯನ್ನ ಗೆಲ್ಲಿಸಬೇಕು ಎಂದು ಜವಾಬ್ದಾರಿ ನೀಡಲಾಗಿದೆ ಅಂತ ತಿಳಿದುಬಂದಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: News First Live
Top