Wednesday, 16 Sep, 2.21 pm News First Live

ಬೀದರ್
ತುಂಬಿ ಹರಿದ ಚಂದಾಪೂರ ಬ್ಯಾರೇಜ್: ನೂರಾರು ಎಕರೆ ಜಮೀನು ಜಲಾವೃತ

ಬೀದರ್​: ಜಿಲ್ಲೆಯ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಸತತ ಮಳೆಯಾಗುತ್ತಿದ್ದು, ಜಿಲ್ಲೆಯ ಮಾಂಜ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದೆ.

ಮಾಂಜ್ರಾ ನದಿಯ ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಭಾಲ್ಕಿ ತಾಲೂಕಿನ ಚಂದಾಪೂರ ಬ್ಯಾರೇಜ್ ತುಂಬಿ ಹರಿಯುತ್ತಿದೆ. ನಿರ್ಮಾಣಗೊಂಡ ಆರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬ್ಯಾರೇಜ್ ತುಂಬಿದ್ದು, ಅಕ್ಕಪಕ್ಕದ ಜಮೀನಿನ ಬೆಳೆಗಳು ಜಲಾವೃತಗೊಂಡಿವೆ. ವರುಣನ ಆರ್ಭಟಕ್ಕೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನೀರು ಪಾಲಾಗಿರುವದನ್ನು ಕಂಡು ರೈತರು ಕಂಗಲಾಗಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: News First Live
Top