Dailyhunt Logo
  • Light mode
    Follow system
    Dark mode
    • Play Story
    • App Story
ಅಲ್ಪ ಕುಸಿತ ಕಂಡ ಚಿನ್ನದ ಬೆಲೆ!

ಅಲ್ಪ ಕುಸಿತ ಕಂಡ ಚಿನ್ನದ ಬೆಲೆ!

ಳೆದೆರಡು ದಿನಗಳಿಂದ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಅಲ್ಪ ಮಟ್ಟಿಗೆ ಇಳಿಕೆಯಾಗಿದೆ.

ಇಂದು ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 27ರೂ. ಕಡಿಮೆಯಾಗಿ ಹತ್ತು ಗ್ರಾಂ ಬೆಲೆ 1,46,730 ರೂ.ಗೆ ಬಂದು ನಿಂತಿದೆ.

ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 25 ರೂ. ಕುಸಿದಿದ್ದು, ಹತ್ತು ಗ್ರಾಂಗೆ 1,34,500 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 20 ರೂ. ಇಳಿಕೆಯಾಗಿ, ಹತ್ತು ಗ್ರಾಂಗೆ 1,10,050 ರೂ. ಗೆ ತಲುಪಿದೆ.

ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 14,673 (-27) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,450 (-25) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,005 (-20) ರೂ. ಬೆಲೆಗೆ ಬಂದು ತಲುಪಿದೆ.

Dailyhunt
Disclaimer: This content has not been generated, created or edited by Dailyhunt. Publisher: News Kannada