Dailyhunt Logo
  • Light mode
    Follow system
    Dark mode
    • Play Story
    • App Story
ಕನಿಷ್ಠ ವೇತನ ಜಾರಿಗೆ ಆಗ್ರಹ, ಗ್ರಾ.ಪಂ.ನೌಕರರಿಂದ ಪ್ರತಿಭಟನೆ!

ಕನಿಷ್ಠ ವೇತನ ಜಾರಿಗೆ ಆಗ್ರಹ, ಗ್ರಾ.ಪಂ.ನೌಕರರಿಂದ ಪ್ರತಿಭಟನೆ!

ಮೈಸೂರು: ಕನಿಷ್ಟ ವೇತನ ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಗ್ರಾಮ ಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲಾ ಪಂಚಾಯ್ತಿ ಮುಂಭಾಗ ನೂರಾರು ನೌಕರರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 7 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ.ಅಲ್ಲದೆ ಹಲವು ಬೇಡಿಕೆಗಳನ್ನೂ ಈಡೇರಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕರವಸೂಲಿಗಾರ, ಡಾಟಾ ಎಂಟ್ರಿ ಮಾಡುವವರು, ನೀರುಗಂಟಿಗಳು, ಜವಾನ ಹಾಗೂ ಸ್ವಚ್ಛಾಗಾರರನ್ನ ಏಕಕಾಲಕ್ಕೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಸೇವಾ ಹಿರಿತನವನ್ನ ಪರಿಗಣಿಸಿ ಇನ್ ಕ್ರಿಮೆಂಟ್ ನೀಡಬೇಕು.

ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ನಿವೃತ್ತಿ ಹೊಂದಿದರೆ ಅಥವಾ ಮರಣ ಹೊಂದಿದರೆ 6 ಲಕ್ಷ ಇಡುಗಂಟಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

Dailyhunt
Disclaimer: This content has not been generated, created or edited by Dailyhunt. Publisher: News Kannada