ಕಾಸರಗೋಡು: ಹಗರಣಗಳ ನೈತಿಕ ಹೊಣೆ ಹೊತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ ನೀಡಬೇಕು.
ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ . ಸಿ ಕಮರುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕೇರಳ ರಾಜ್ಯೋತ್ಸವ ದಿನವಾದ ಇಂದು ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು , ತಲಪಾಡಿಯಿಂದ ತಿರುವನಂತಪುರ ತನಕ ಪ್ರತಿಭಟನೆ ಆಯೋಜಿಸಿದೆ.
ಕೋವಿಡ್ ಮಾನದಂಡದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ಹಮ್ಮಿಕೊಂಡಿದ್ದು , ಕಾಸರಗೋಡಿನಲ್ಲಿ ನಡೆದ ಪ್ರತಿಭಟನೆಯನ್ನು ರಾಷ್ಟ್ರೀಯ ಸಮಿತಿ ಸದಸ್ಯ ಪಿ . ಕೆ ಕೃಷ್ಣ ದಾಸ್ ಉದ್ಘಾಟಿಸಿದರು . ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು ಜಿಲ್ಲೆಯ ಪ್ರಮುಖ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಿತು

