ಬಾಗಲಕೋಟೆ : ಜಿಲ್ಲೆಯಲ್ಲಿ ಕೋವಿಡ್‍ನಿಂದ ಓರ್ವ ವ್ಯಕ್ತಿ ಗುಣಮುಖರಾಗಿದ್ದು, ಹೊಸದಾಗಿ ಯಾವುದೇ ಕೊರೊನಾ ಪ್ರಕರಣಗಳು ಮಂಗಳವಾರ ದೃಡಪಟ್ಟಿಲ್ಲವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 35165 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 34808 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ
ಸಕ್ರಿಯ ಪ್ರಕರಣಗಳು 27 ಇದ್ದು, ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾದ 3290 ಸ್ಯಾಂಪಲ್ ಪೈಕಿ ಯಾವುದೇ ಪಾಜಿಟಿವ್ ಪ್ರಕರಣ ಕಂಡುಬಂದಿರುವದಿಲ್ಲ. ಪಾಜಿಟಿವಿಟಿ ಪ್ರಮಾಣ ಶೇ 0.00 ಇರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

