ಮೈಸೂರು : ಹೋಟೇಲ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದರು. ಹೆಚ್. ಡಿ ಕೋಟೆ ಪಟ್ಟಣದ ಹೋಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೋಟೆಲ್ನ ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.
ಕೆಲವು ಹೋಟೆಲ್ಗಳು ಸ್ವಚ್ಛತೆ ಇಲ್ಲದ ಕಾರಣ ನೋಟಿಸ್ ನೀಡಿ, ಅಧಿಕಾರಿಗಳು ದಂಡ ವಿಧಿಸಿದರು.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ದಾಳಿ ನಡೆಯುತ್ತಿದೆ. ಹೆಚ್. ಡಿ ಕೋಟೆ ಪಟ್ಟಣದ ಹೋಟೆಲ್‌ಗಳಲ್ಲಿ ಅಧಿಕಾರಿಗಳಿಂದ ತಪಾಸಣೆ ನಡೆಸಿದರು. ಆಹಾರ ಸುರಕ್ಷತಾಧಿಕಾರಿ ಡಾ. ರವಿಕುಮಾರ್ ಟೀಂನಿಂದ ಕಾರ್ಯಾಚರಣೆ ನಡೆಸಲಾಯಿತು.
ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ನೀಡುವ ಆಹಾರದ ಸ್ವಚ್ಛತೆ ಮತ್ತು ಸುರಕ್ಷತೆಯು ಜನರ ಆರೋಗ್ಯ ಕಾಪಾಡಲು ಅತ್ಯಂತ ಮುಖ್ಯವಾಗಿದೆ. ಹಾಗೂ FSSA ಪರವಾಣಿಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಅಡುಗೆ ಮಾಡುವ ಸ್ಥಳ, ಬಳಸುವ ಪದಾರ್ಥಗಳು ಮತ್ತು ಸಿಬ್ಬಂದಿಯ ಸ್ವಚ್ಛತೆಯು ಕಡ್ಡಾಯವಾಗಿರಬೇಕು. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ ಎಂದು ಆಹಾರ ಸಂರಕ್ಷಣಾ ಅಧಿಕಾರಿ ಡಾ. ರವಿಕುಮಾರ್ ಹೇಳಿಕೆ ನೀಡಿದರು.

