Dailyhunt Logo
  • Light mode
    Follow system
    Dark mode
    • Play Story
    • App Story
ಮಳೆಯ ಮುನ್ಸೂಚನೆ; ರಾಜ್ಯದ 11 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಣೆ!

ಮಳೆಯ ಮುನ್ಸೂಚನೆ; ರಾಜ್ಯದ 11 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಣೆ!

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಜೂನ್ 9ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ತೀರದ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ನಾಳೆಯಿಂದಲೇ ಇಲಾಖೆಯು 11 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' (Orange Alert) ಘೋಷಿಸಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಆತಂಕವಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮಳೆಯ ಸಂದರ್ಭದಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಅಬ್ಬರದ ಜೊತೆಗೆ ಕೆಲವೆಡೆ ಆಲಿಕಲ್ಲು ಮಳೆಯೂ ಬೀಳಬಹುದು ಎಂದು ಅಂದಾಜಿಸಲಾಗಿದೆ.

ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: News Kannada